Advertisement

ಮಂಜುನಾಥ ಪ್ರಸಾದ್‌ ಮತ್ತೆ ಬಿಬಿಎಂಪಿ ಆಯುಕ್ತ

11:38 AM Jun 29, 2018 | |

ಬೆಂಗಳೂರು: ರಾಜ್ಯ ಸರ್ಕಾರ ಆರು ಐಎಎಸ್‌ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ವಿಧಾನಸಭೆ ಚುನಾವಣೆಗೂ ಮೊದಲು ಬಿಬಿಎಂಪಿಯಿಂದ ವರ್ಗಾವಣೆಗೊಂಡು ಸ್ಥಳ ನಿಯುಕ್ತಿಗಾಗಿ ಕಾಯುತ್ತಿದ್ದ ಎನ್‌.ಮಂಜುನಾಥ ಪ್ರಸಾದ್‌ ಅವರನ್ನು ಮತ್ತೆ ಬಿಬಿಎಂಪಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಬಿಬಿಎಂಪಿ ಆಯುಕ್ತರಾಗಿದ್ದ ಎನ್‌.ಮಹೇಶ್ವರ್‌ ರಾವ್‌ ಅವರನ್ನು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ್‌ ಖತ್ರಿ ಅವರಿಗೆ ಹೆಚ್ಚುವರಿಯಾಗಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ವಹಿಸಲಾಗಿದೆ.

ಐಟಿ ಬಿಟಿ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ ಅವರಿಗೆ ಹೆಚ್ಚುವರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೊಣೆಗಾರಿಕೆ ನೀಡಲಾಗಿದೆ. ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಎಂಡಿ ವಿ.ಯಶವಂತ ಅವರನ್ನು ಹಾಲಿ ಹುದ್ದೆಯೊಂದಿಗೆ ಅಬಕಾರಿ ಇಲಾಖೆಯ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ. ಕೆ.ಬಿ.ಶಿವಕುಮಾರ್‌ ಅವರನ್ನು ಡಿಪಿಎಆರ್‌(ಸೇವೆ) ಉಪ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next