Advertisement

ರೋಹಿಣಿ ಸಿಂಧೂರಿ ವಿರುದ್ಧ ಆಧಾರ ರಹಿತ ಆರೋಪ

06:40 AM Apr 15, 2018 | |

ಹಾಸನ/ಮೈಸೂರು: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಶೀತಲ ಸಮರ ಮುಂದುವರಿದಿದ್ದು, ಮೈಸೂರು ಪ್ರಾದೇಶಿಕ ಆಯುಕ್ತರ ವಿಚಾರಣಾ ವರದಿಯಲ್ಲಿ ಮತ್ತೆ ಎ.ಮಂಜು ಅವರಿಗೆ ಮುಖಭಂಗವಾಗಿದೆ.

Advertisement

ವಿಧಾನಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ನಡೆದ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅವರನ್ನು ಮೈಸೂರಿಗೆ, ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ರಂದೀಪ್‌ ಡಿ.ಅವರನ್ನು ಹಾಸನಕ್ಕೆ ಸರ್ಕಾರ ವರ್ಗಾಯಿಸಿತ್ತು. ಸರ್ಕಾರದ ಆದೇಶದ ವಿರುದ್ಧ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ ಅವರು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ತಂದು ಹಾಸನದಲ್ಲೇ ಉಳಿದುಕೊಂಡರು. ಚುನಾವಣೆ ಘೋಷಣೆ ನಂತರ ನೀತಿ ಸಂಹಿತೆ ಜಾರಿಯಲ್ಲಿರುವಾಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಿಯಮಬಾಹಿರವಾಗಿ ಕೆಲಸ ನಡೆಯುತ್ತಿದೆ ಎಂದು ಸ್ವತಃ ಜಿಲ್ಲಾಧಿಕಾರಿಯೇ, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರು.ಅದಾದ ಬಳಿಕ ಎ.ಮಂಜು ಅವರು, ಜಿಲ್ಲಾಧಿಕಾರಿ ದುರುದ್ದೇಶದಿಂದ ತಮ್ಮ ವಿರುದ್ಧ ಎಫ್ಐಆರ್‌ ದಾಖಲಿಸಿದ್ದು, ಜಿಲ್ಲಾಧಿಕಾರಿ ವರ್ಗ ಮಾಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ಏ.7ರಂದು ದೂರು ಸಲ್ಲಿಸಿದ್ದರು. ಈ ಸಂಬಂಧ ಚುನಾವಣಾ ಆಯೋಗ ಮೈಸೂರು ಪ್ರಾದೇಶಿಕ ಆಯುಕ್ತರ ವರದಿ ಕೇಳಿತ್ತು.

ವಿಚಾರಣೆ ನಡೆಸಿದ ಮೈಸೂರು ಪ್ರಾದೇಶಿಕ ಆಯುಕ್ತ ಶಿವಯೋಗಿ ಎನ್‌.ಕಳಸದ್‌, ಸಚಿವರು ರೋಹಿಣಿ ಸಿಂಧೂರಿ ವಿರುದ್ಧ ನೀಡಿರುವ ದೂರಿನಲ್ಲಿ ಯಾವುದೇ ಹುರುಳಿಲ್ಲ. ಇದೊಂದು ಆಧಾರ ರಹಿತ ಆರೋಪ ಎಂದು ವರದಿಯಲ್ಲಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next