Advertisement
ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಗುತ್ತಿಗೆದಾರರು ಹಾಲು ಸಾಗಾಣೆಯಲ್ಲಿ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಗಂಭೀರ ಹಾಗೂ ಸೂಕ್ಷö್ಮವಾಗಿರುವುದರಿಂದ ಪಾರದರ್ಶಕತೆ ಹಾಗೂ ತೀವ್ರತರ ತನಿಖೆ ನಡೆಸಬೇಕಾಗಿರುವುದರಿಂದ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಬಿ.ಎಸ್.ನಾಗರತ್ಮಮ್ಮ ಆದೇಶದಲ್ಲಿ ತಿಳಿಸಿದ್ದಾರೆ.ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೊದಲ ಹಂತವಾಗಿ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿತ್ತು. ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಳೆದ ವಾರ ಸಿಐಡಿ ವಹಿಸಲಾಗುವುದು ಎಂದು ಘೋಷಣೆ ಮಾಡಿದ್ದರು. ಆದರೆ ಅಧಿಕೃತ ಆದೇಶ ಹೊರ ಬಿದ್ದಿರಲಿಲ್ಲ.
ಆದರೆ ಜಿಲ್ಲೆಯಲ್ಲಿ ಹೋರಾಟಗಾರರು, ರೈತಸಂಘಟನೆಗಳು, ಕಾರ್ಮಿಕ, ದಲಿತ, ಮಹಿಳಾ ಸಂಘಟನೆಗಳು, ಹಿರಿಯ ಸಹಕಾರಿಗಳು, ರಾಜಕೀಯ ಮುಖಂಡರು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಪ್ರಕರಣವನ್ನು ಸಿಬಿಐಗೆ ವಹಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದವು.