ಪಣಜಿ: ಪ್ರಧಾನಿ ನರೇಂದ್ರ ಮೋದಿ ರವರು ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ದೇಶವಾಸಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಕಾರ್ಯಕ್ರಮದ 100ನೇ ಸಂಚಿಕೆ ಇಂದು ಎಲ್ಲೆಡೆ ಪ್ರಸಾರವಾಗಿದೆ. ಈ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಿಸಿದ ನಂತರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾತನಾಡಿ-ಮನ್ ಕಿ ಬಾತ್ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ರೇಸ್ ಗೆ ಸೇರಬೇಕು, ದೇಶದ ಯಾವುದೇ ಪ್ರಧಾನಿ ಇಂತಹ ಕಾರ್ಯಕ್ರಮದ 100 ಸಂಚಿಕೆಗಳನ್ನು ಪೂರ್ಣಗೊಳಿಸಿಲ್ಲ. ಅಲ್ಲದೆಯೇ ಮನ್ ಕಿ ಬಾತ್ ಕಾರ್ಯಕ್ರಮ ಅತಿ ಹೆಚ್ಚು ವೀಕ್ಷಿಸಿದ ಕಾರ್ಯಕ್ರಮವೂ ಹೌದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.
ಪ್ರಧಾನಿ ಅವರು ದೇಶದ ಜನರೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಭಾರತದ ಜನರ ಆಕಾಂಕ್ಷೆಗಳನ್ನು ಪ್ರೇರೇಪಿಸುವ ಮತ್ತು ಪ್ರಸಕ್ತ ನಡೆಯುತ್ತಿರುವ ವಿಷಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮನ್ ಕಿ ಬಾತ್ ಏಕಪಕ್ಷೀಯ ಸಂಭಾಷಣೆಯಾಗಿರದೆ ‘ಸ್ವಯಂ ಸೇ ಸಮಷ್ಟಿ’ ಆಂದೋಲನವಾಗಿದೆ. ‘ಮನ್ ಕಿ ಬಾತ್ ನ ಈ ಕಾರ್ಯಕ್ರಮಗಳನ್ನು ಗೋವಾದ ವಿವಿಧ ಭಾಗಗಳಲ್ಲಿಯೂ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮನ್ ಕಿ ಬಾತ್ ಕಾರ್ಯಕ್ರಮದ 100 ಸಂಚಿಕೆಗಳನ್ನು ಪೂರೈಸಿದ್ದಕ್ಕಾಗಿ ಗೋವಾದ ಜನತೆಯ ಪರವಾಗಿ ನಾನು ಮತ್ತೊಮ್ಮೆ ಪ್ರಧಾನಿಯವರಿಗೆ ಧನ್ಯವಾದ ಮತ್ತು ಅಭಿನಂದನೆಗಳನ್ನು ಸಲ್ಲಿಸಲು ಬಯಸುತ್ತೇನೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.
ಗೋವಾ ರಾಜ್ಯದಲ್ಲಿ ಒಟ್ಟು 1722 ಬೂತ್‍ಗಳಿದ್ದು, ಈ ಪೈಕಿ 1250 ಬೂತ್‍ಗಳನ್ನು ಮನ್ ಕಿ ಬಾತ್‍ಗೆ ಬಳಸಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ನಾಗರಿಕರು, ಪಕ್ಷದ ಎಲ್ಲಾ ಶಾಸಕರು, ಸಂಸದರು, ಸಚಿವರು, ಮುಖಂಡರು, ಪದಾಧಿಕಾರಿಗಳು ಸಹ ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಿಸಿದರು.