ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಮನೋಹರ್ ಲಾಲ್ ಖಟ್ಟರ್ ದೀಪಾವಳಿ ದಿನ(ಅ.27)ದಂದು ಎರಡನೇ ಬಾರಿ ಹರ್ಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ ಮಧ್ಯಾಹ್ನ 2ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಖಟ್ಟರ್ ಜತೆಗೆ ಉಪಮುಖ್ಯಮಂತ್ರಿಯೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ ಉಪಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಲಿದ್ದಾರೆ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಾಗಿದೆ.
ಭಾನುವಾರ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಖಟ್ಟರ್ ಜತೆ ಬೇರೆ ಯಾವ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಕಡಿಮೆ ಇದ್ದಿರುವುದಾಗಿ ವರದಿ ವಿವರಿಸಿದೆ.
ಭಾರತೀಯ ಜನತಾ ಪಕ್ಷ ದುಶ್ಯಂತ ಚೌಟಾಲ ನೇತೃತ್ವದ ಜೆಜೆಪಿ ಜತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಹರ್ಯಾಣದಲ್ಲಿ ಸರ್ಕಾರ ರಚನೆಗೆ ಮುಂದಾಗಿದೆ. ಬಿಜೆಪಿ ಮತ್ತು ಜೆಜೆಪಿ ಮುಖಂಡರ ಜತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಿದ ನಂತರ ಬಿಜೆಪಿ, ಜೆಜೆಪಿ ಮೈತ್ರಿಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ವರದಿ ತಿಳಿಸಿದೆ.
ಮೈತ್ರಿಯ ಪ್ರಕಾರ ಜೆಜೆಪಿಯ ದುಶ್ಯಂತ್ ಪಟೇಲ್ ಹರ್ಯಾಣದ ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ. ಏತನ್ಮಧ್ಯೆ ದುಶ್ಯಂತ್ ತಾಯಿ, ಜೆಜೆಪಿ ನಾಯಕಿ ನೈನಾ ಸಿಂಗ್ ಚೌಟಾಲ ಹೆಸರು ಕೂಡಾ ಉಪಮುಖ್ಯಮಂತ್ರಿ ಸ್ಥಾನಕ್ಕೆ ಹೆಸರು ಕೇಳಿ ಬಂದಿದೆ.