Advertisement

ಪರಿಕ್ಕರ್‌ ಚಿಕಿತ್ಸೆಗಾಗಿ ಮತ್ತೆ ಅಮೆರಿಕಕ್ಕೆ; ಗೋವಾ ಸಿಎಂ ಬದಲಾವಣೆ?

02:24 PM Aug 29, 2018 | Team Udayavani |

ಮುಂಬಯಿ: ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರು ಚಿಕಿತ್ಸೆಗಾಗಿ ಮತ್ತೆ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಹುದ್ದೆಗೆ ಬೇರೆಯವರನ್ನು ನೇಮಕ ಮಾಡುವ ಸಾಧ್ಯತೆಗಳು ದಟ್ಟವಾಗಿವೆ. 

Advertisement

3 ತಿಂಗಳು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಗೋವಾಕ್ಕೆ ಮರಳಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದ  62 ರ ಹರೆಯದ  ಪರಿಕ್ಕರ್‌ ಮತ್ತೆ ಅನಾರೋಗ್ಯಕ್ಕೀಡಾಗಿ ಮುಂಬಯಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬುಧವಾರ ರಾತ್ರಿಯೆ ವಿಮಾನದಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ ಎಂದು ಗೋವಾ ಸರಕಾರದ ಉನ್ನತ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ರಕ್ಷಣಾ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಿಕ್ಕರ್‌ ಅವರು ಬಿಜೆಪಿಗೆ ಬಹುಮತವಿಲ್ಲದೆ ಇತರರ ಬೆಂಬಲ ಪಡೆದು ಸರಕಾರ ರಚಿಸುವ ಅನಿವಾರ್ಯತೆ ಎದುರಾದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ 2017 ರಲ್ಲಿ ಮತ್ತೆ ಗೋವಾದ ಮುಖ್ಯಮಂತ್ರಿ ಹುದ್ದೆಗೇರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next