Advertisement

ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಗೋವಾ ಸಿಎಂ ಪರ್ರಿಕರ್‌

07:30 AM Mar 09, 2018 | |

ಪಣಜಿ: ಪ್ಯಾಂಕ್ರಿಯಾಟಿಕ್‌ ಸಮಸ್ಯೆಯಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕ್ಕೆ ತೆರಳಿದ್ದಾರೆ. ಪರ್ರಿಕರ್‌ ಅನುಪಸ್ಥಿತಿಯಲ್ಲಿ ಸರ್ಕಾರದ ಕಾರ್ಯನಿರ್ವಹಣೆ ಸುಗಮವಾಗಿ ಸಾಗಲು, ಮೂವರು ಸಚಿವರ ಸಮಿತಿಯನ್ನು ಪರ್ರಿಕರ್‌ ನಿರ್ಮಿಸಿದ್ದಾರೆ. ಮೂಲಗಳ ಪ್ರಕಾರ ಪರ್ರಿಕರ್‌ ಪ್ಯಾಂಕ್ರಿಯಾಟಿಕ್‌ ಕ್ಯಾನ್ಸರ್‌ನ ನಾಲ್ಕನೇ ಹಂತದಲ್ಲಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಗೋವಾ ಸರ್ಕಾರವಾಗಲೀ, ಆಸ್ಪತ್ರೆಗಳಾಗಲೀ ನೀಡಿಲ್ಲ.

Advertisement

ಸೋಮವಾರ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಪರ್ರಿಕರ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರವೇ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಅದಕ್ಕೂ ಮುನ್ನ ರಾಜ್ಯಪಾಲೆ ಮೃದುಲಾ ಸಿನ್ಹಾಗೆ ಪತ್ರ ಬರೆದು, ಪರ್ಯಾಯ ವ್ಯವಸ್ಥೆಯ ವಿವರ ತಿಳಿಸಿದ್ದಾರೆ. ಆದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ಪರ್ರಿಕರ್‌ ಅನುಮತಿ ಇಲ್ಲದೇ ಹೊರಡಿಸಬಾರದು ಎಂದೂ ಅವರು ಸೂಚಿಸಿದ್ದಾರೆ.

ಕಳೆದ ತಿಂಗಳೂ ಆಸ್ಪತ್ರೆಗೆ ದಾಖಲಾಗಿದ್ದರಾದರೂ, ಬಿಡುಗಡೆಗೊಂಡು ಬಂದು ಬಜೆಟ್‌ ಮಂಡನೆ ಮಾಡಿದ್ದರು. ನಂತರ ಕೆಲವೇ ದಿನಗಳಲ್ಲಿ ಹೊಟ್ಟೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next