Advertisement

ಕಾರ್ಮಿಕರ ಸಹಾಯಧನ ಬಿಡುಗಡೆಗೆ ಮನೋಜ್‌ ಸೂಚನೆ

06:57 PM May 01, 2020 | Suhan S |

ಹಾವೇರಿ: ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ನೆರವಿನ ಹಣವನ್ನು ತ್ವರಿತವಾಗಿ ಎಲ್ಲ ನೋಂದಾಯಿತ ಅರ್ಹ ಎಲ್ಲ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚನೆ ನೀಡಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

Advertisement

ಜಿಲ್ಲೆಯಲ್ಲಿ ನೋಂದಾಯಿತ 38 ಸಾವಿರ ಕಾರ್ಮಿಕರ ಪೈಕಿ ನಾಲ್ಕು ಸಾವಿರ ಕಾರ್ಮಿಕರಿಗೆ ಈಗಾಗಲೇ ಹಣ ಜಮೆಯಾಗಿದೆ. ಜಿಲ್ಲಾ ಕಚೇರಿಯಿಂದ ಎಲ್ಲರ ಮಾಹಿತಿಯನ್ನು ಕೇಂದ್ರ ಕಚೇರಿಗೆ ಒದಗಿಸಲಾಗಿದೆ. ಪರಿಶೀಲನೆ ನಂತರ ಕೇಂದ್ರ ಕಚೇರಿಯಿಂದಲೇ ನೇರವಾಗಿ ಕಾರ್ಮಿಕರ ಖಾತೆಗೆ ಹಣ ಜಮೆಯಾಗಲಿದೆ ಎಂದು ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾಹಿತಿ ನೀಡಿದರು.

ಕಳಪೆ ಬಿತ್ತನೆ ಬೀಜ ದಾಸ್ತಾನು ಮಾಡಿದ ಕೋಲ್ಡ್‌ ಸ್ಟೋರೇಜ್‌ ಸೀಜ್‌ ಮಾಡಲಾಗಿದೆ. ಈ ಬೀಜಗಳನ್ನು ಬೇರೆಡೆ ಸ್ಥಳಾಂತರಿಸಿ ಕೋಲ್ಡ್‌ ಸ್ಟೋರೆಜ್‌ ಖಾಲಿ ಮಾಡಿಕೊಡಲು ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು. ಚೆಕ್‌ಪೋಸ್ಟ್‌ ಚಟವಟಿಕೆ ಕುರಿತಂತೆ ಮಾಹಿತಿ ಪಡೆದ ಅವರು, ಪ್ರತಿ ವಾಹನಗಳ ಮೇಲೆ ತೀವ್ರ ನಿಗಾವಹಿಸಬೇಕೆಂದು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ. ದೇವರಾಜು, ಜಿಪಂ ಸಿಇಒ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಇನ್ನಿತರ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next