ನವದೆಹಲಿ: ಪಂಜಾಬ್‌ನ ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಮನ್‌ಪ್ರೀತ್ ಸಿಂಗ್ ಬಾದಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್‌ನಲ್ಲಿನ ಗುಂಪುಗಾರಿಕೆಯಿಂದ ಬೇಸತ್ತು ಪಕ್ಷ ತ್ಯಜಿಸಿ, ಬಿಜೆಪಿಯತ್ತ ತೆರಳಿದ್ದಾಗಿ ನವದೆಹಲಿಯಲ್ಲಿ ಬಾದಲ್ ಹೇಳಿಕೊಂಡಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸಮ್ಮುಖದಲ್ಲಿ ಬಾದಲ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಐದು ಬಾರಿ ಶಾಸಕರಾಗಿರುವ ಮನ್‌ಪ್ರೀತ್ ಸಿಂಗ್ ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಬೆಳವಣಿಗೆಗೆ ಲೇವಡಿ ಮಾಡಿರುವ ಕಾಂಗ್ರೆಸ್ “ಪಂಜಾಬ್ ಕಾಂಗ್ರೆಸ್‌ನಲ್ಲಿ ಇರುವ ಮೋಡಗಳು (ಬಾದಲ್) ಸರಿದಿವೆ’ ಎಂದು ಹೇಳಿದೆ.
ಇದನ್ನೂ ಓದಿ: ಕೊರಟಗೆರೆ: ಸ್ವಂತ ಹಣದಿಂದ ರಸ್ತೆ ದುರಸ್ತಿ ಮಾಡಿದ ಬಿಜೆಪಿ ಮುಖಂಡ ಅನಿಲ್‌ಕುಮಾರ್