ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ನನ್ನು ಆಗಸ್ಟ್ 1ವರೆಗೆ ಜಾರಿನಿರ್ದೇ ಶನಾಲಯದ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಈ ಹಿಂದೆ ನೀಡಿದ್ದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಮನ್ಸೂರ್ ಖಾನ್‌ನನ್ನು ನಗರದ 1ನೇ ಸೆಷನ್ಸ್ ನ್ಯಾಯಾಲಯದ ಮುಂದೆ ಇ.ಡಿ ಅಧಿಕಾರಿಗಳು ಹಾಜರುಪಡಿಸಿದ್ದರು.
ವಿಚಾರಣೆ ವೇಳೆ ಇ.ಡಿ ಪರ ವಕೀಲರು, ಆರೋಪಿ ಮನ್ಸೂರ್ ಅನಾರೋಗ್ಯದಿಂದ ಬಳಲುತ್ತಿದ್ದು, ಪೂರ್ಣ ವಿಚಾರಣೆ ನಡೆಸಲಾಗಿಲ್ಲ. ಜತೆಗೆ, ಆತ ನೀಡಿರುವ ಮಾಹಿತಿ ಆಧರಿಸಿ ಕೆಲವು ಆಸ್ತಿ ಜಪ್ತಿ ಮಾಡಿಕೊಳ್ಳುವ ಪ್ರಕ್ರಿಯೆ ಬಾಕಿ ಉಳಿದಿದೆ. ಹೀಗಾಗಿ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ವಾದ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಯನ್ನು ಐದು ದಿನಗಳ ಕಾಲ ಇ.ಡಿ ವಶಕ್ಕೆ ನೀಡಿ ಆ.1ಕ್ಕೆ ವಿಚಾರಣೆ ಮುಂದೂಡಿದೆ.
ಡೀಸಿ ವಿಜಯಶಂಕರ್‌ಗೆ ಜಾಮೀನು: ಐಎಂಎ ಮಾಲೀಕ ಮನ್ಸೂರ್ ಖಾನ್ ಬಳಿ 1.5 ಕೋಟಿ ರೂ. ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯ್‌ಶಂಕರ್‌ಗೆ ನ್ಯಾಯಾಲಯ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ. ಎಸ್‌ಐಟಿ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಾಧಾರ ನಾಶಪಡಿಸಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿದೆ. ಐಎಂಎ ಅವ್ಯವ ಹಾರ ನಡೆಸುತ್ತಿಲ್ಲ ಎಂಬುದಾಗಿ ಸುಳ್ಳು ವರದಿ ನೀಡಲು ಮನ್ಸೂರ್‌ನಿಂದ 1.5 ಕೋಟಿ ರೂ. ಲಂಚ ಪಡೆದ ಆರೋಪವನ್ನು ವಿಜಯ್‌ಶಂಕರ್ ಎದುರಿಸುತ್ತಿದ್ದಾರೆ.