Advertisement
ಈ ಹಿನ್ನೆಲೆಯಲ್ಲಿ ಶನಿವಾರ ಮನ್ಸೂರ್ ಖಾನ್‌ನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಮನ್ಸೂರ್ ಖಾನ್ ವಿಚಾರಣೆ ಮಹತ್ವ ಪಡೆದುಕೊಳ್ಳಲಿದೆ. ಜು.20ರಿಂದ ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ಆರೋಪಿ ಮನ್ಸೂರ್ ಖಾನ್‌ನನ್ನು ಆ.1ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅದರ ಬೆನ್ನಲ್ಲೇ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಾಡಿ ವಾರೆಂಟ್ ಮೂಲಕ ಆರೋಪಿಯನ್ನು ವಶಕ್ಕೆ ನೀಡುವಂತೆ ಶುಕ್ರವಾರ ಅರ್ಜಿ ಸಲ್ಲಿಸಿದ್ದರು.
Related Articles
Advertisement
ಅದರ ಬೆನ್ನಲ್ಲೇ ಎಸ್‌ಐಟಿ ಏಳು ಮಂದಿ ಸಂಸ್ಥೆಯ ನಿರ್ದೇಶಕರು, ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ, ಬಿಬಿಎಂಪಿ ನಾಮನಿರ್ದೇಶಿತ ಸದಸ್ಯರು, ಮೌಲ್ವಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿತ್ತು. ಆದರೂ ಮನ್ಸೂರ್ ಖಾನ್ ಸುಳಿವು ಸಿಕ್ಕಿರಲಿಲ್ಲ. ಆದರೆ, ಆರೋಪಿ ರಾಜಕೀಯ ದಿಗ್ಗಜರ ಹೆಸರು ಪ್ರಸ್ತಾಪಿಸಿದ್ದರಿಂದ ಅಚ್ಚರಿಗೊಂಡಿದ್ದ ಎಸ್‌ಐಟಿಗೆ ಆರೋಪಿಯ ಬಂಧನ ಅನಿವಾರ್ಯವಾಗಿತ್ತು.
ಹೀಗಾಗಿ ಹಲವು ಆಯಾಮಗಳಲ್ಲಿ ಕಾರ್ಯಾಚರಣೆ ಕೈಗೊಂಡಿದ್ದ ಎಸ್‌ಐಟಿ ಬ್ಲೂಕಾರ್ನರ್ ನೋಟಿಸ್ ಸಹ ಹೊರಡಿಸಿತ್ತು. ಈ ಮಧ್ಯೆ ಕೆಲ ದಿನಗಳ ಹಿಂದೆ ಮನ್ಸೂರ್ ಖಾನ್ ವಿಡಿಯೋ ಬಿಡುಗಡೆ ಮಾಡಿ ಪೊಲೀಸ್ ಭದ್ರತೆ ಕೊಟ್ಟರೆ, ಭಾರತಕ್ಕೆ ಮರಳುವುದಾಗಿ ಹೇಳಿಕೊಂಡಿದ್ದ. ಮತ್ತೂಂದೆಡೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತೆರೆಮರೆಯಲ್ಲೇ ಆರೋಪಿಯ ಆರೋಪಿಯ ಚಲವಲನಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದ ಜಾರಿ ನಿರ್ದೇಶನಾಲಯ ಆರೋಪಿ ವಿರುದ್ಧ ಸ್ವಯಂ ಪ್ರೇರಿತವಾಗಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ-2002 (ಪಿಎಂಎಲ್‌ಎ)ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದಿತ್ತು.
ಫಲಿಸದ ಎಸ್‌ಐಟಿ ಶ್ರಮ: ಆರೋಪಿಯ ಚಲನವಲನಗಳ ಮಾಹಿತಿ ಪಡೆದುಕೊಂಡಿದ್ದ ಎಸ್‌ಐಟಿಯ ಇಬ್ಬರು ಡಿವೈಎಸ್‌ಪಿ ನೇತೃತ್ವದ ಅಧಿಕಾರಿಗಳು ತಂಡ ಕೆಲ ನಿಯಮಗಳನ್ನು ಉಲ್ಲಂಘಿಸಿ ದುಬೈಗೆ ತೆರಳಿ ಆರೋಪಿಯನ್ನು ಮನವೊಲಿಸಿ ಮೊದಲು ವಶಕ್ಕೆ ಪಡೆದುಕೊಳ್ಳಲು ಸಾಧ್ಯವಾಗಿರಲಿಲ್ಲ. ಅಲ್ಲದೆ, ಆರೋಪಿ ವಾಪಸ್ ಬರುತ್ತಿದ್ದ ವಿಮಾನದಲ್ಲೇ ಪೊಲೀಸ್ ಅಧಿಕಾರಿಗಳು ಬರುತ್ತಿದ್ದು, ದೆಹಲಿ ಅಥವಾ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ವಲಸೆ ಅಧಿಕಾರಿಗಳಿಂದ ಮಾಹಿತಿ ಪಡೆದ ಇಡಿ ಅಧಿಕಾರಿಗಳನ್ನು ಆರೋಪಿಯನ್ನು ವಶಕ್ಕೆ ಪಡೆದುಕೊಂಡು, ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಕೆಲ ವ್ಯಕ್ತಿಗಳನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದೆ.
ನಂತರ ಆರೋಪಿಯನ್ನು ವಶಕ್ಕೆ ಪಡೆಯಲು ಕೋರ್ಟ್ ಮೂಲಕವೂ ಯತ್ನಿಸಲಾಗಿತ್ತು. ಆದರೆ, ಸಾಧ್ಯವಾಗಲಿಲ್ಲ. ಮತ್ತೂಂದೆಡೆ ಎಸ್‌ಐಟಿಯ ನಿಯಮ ಉಲ್ಲಂಘನೆಗಳೇ ಅದಕ್ಕೆ ಮುಳುವಾಗಿತ್ತು. ಹೀಗಾಗಿ ಅಂತಿಮ ಹಂತದವರೆಗೆ ಕಾಯುತ್ತಿದ್ದ ಎಸ್‌ಐಟಿ ಆ.1ರಂದು ಇಡಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದಂತೆ ಬಾಡಿ ವಾರೆಂಟ್ ಅರ್ಜಿ ಸಲ್ಲಿಸಿ ಇದೀಗ 14 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.