Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾದ ಎಂ.ಎಸ್. ಕಾಯ್ದೆ ಮತ್ತು ನಿಯಮಗಳು-2013ರ ಅಂಶಗಳ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
Related Articles
Advertisement
ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯಕ್ಕೆ ಖಾಸಗಿಯಾಗಿ ಕಾರ್ಮಿಕರ ನಿಯೋಜನೆ ಮಾಡಿದರೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಮಾನ್ಯುಯಲ್ ಸ್ಕ್ಯಾವೆಂಜರ್ ಕೆಲಸದಿಂದ ವಿಮುಕ್ತಗೊಳಿಸಬೇಕು ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸಬೇಕು. ಗುರುತಿನ ಚೀಟಿ(ಐಡಿ ಕಾರ್ಡ್) ನೀಡಬೇಕು, ವೃತ್ತಿಪರ ಕೌಶಲ ತರಬೇತಿ ನೀಡಬೇಕು. ಸಹಾಯಧನ ಸೌಲಭ್ಯ ಒದಗಿಸಬೇಕು. ಅವರ ಮಕ್ಕಳಿಗೆ ಸರ್ಕಾರ ಗುರುತಿಸಿದ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಬೇಕು. ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯ ಒದಗಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಈವರೆಗೆ 93 ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳು ಮರಣ ಹೊಂದಿದ್ದಾರೆ. ಹಾಗಾಗಿ ಯಂತ್ರಗಳ ಮೂಲಕವೇ ಶೌಚಾಲಯ ಗುಂಡಿಗಳನ್ನು ಸ್ವತ್ಛಗೊಳಿಸಬೇಕು. ಈ ಕುರಿತು ಅರಿವು ಮೂಡಿಸಬೇಕು. ಸರ್ಕಾರದ ಯೋಜನೆಗಳ ಕುರಿತು ತಿಳಿವಳಿಕೆ ನೀಡಬೇಕು. ಬದುಕು ಬವಣೆ ಎಂಬ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಸಾಕ್ಷ್ಯಚಿತ್ರ ತೋರಿಸಿ ಜಾಗೃತಿ ಮೂಡಿಸಬೇಕು. ಕಾಯ್ದೆ ಉಲ್ಲಂಘನೆಯಾಗದಂತೆ ಜಾಗೃತಿ ವಹಿಸಬೇಕು ಹಾಗೂ ಸಫಾಯಿ ಕರ್ಮಚಾರಿಗಳು ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳು ಅಲ್ಲ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ, ಅಪರ ಜಿಲ್ಲಾಧಿಕಾರಿ ಡಾ| ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ, ಉಪವಿಭಾಗಾಧಿಕಾರಿಗಳಾದ ಅನ್ನಪೂರ್ಣ ಮುದಕಮ್ಮನವರ, ಶಿವಾನಂದ ಉಳ್ಳಾಗಡ್ಡಿ, ಡಿವೈಎಸ್‌ಪಿ ಶಂಕರ ಮಾರಿಹಾಳ ಇದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ ಸ್ವಾಗತಿಸಿದರು.
ಸೆಪ್ಟಿಕ್ ಟ್ಯಾಂಕ್‌ಗಳ ಸ್ವತ್ಛತೆ ಸಂದರ್ಭದಲ್ಲಿ ಮರಣಗಳು ಸಂಭವಿಸುತ್ತಿದ್ದು, ಇಂತಹ ಘಟನೆಗಳು ನಡೆದರೆ ತಪ್ಪಿತಸ್ಥರ ಮೇಲೆ ಕಾನೂನು ಪ್ರಕಾರ ಸೂಕ್ತ ಕ್ರಮಕೈಗೊಳ್ಳಲು ಆಯೋಗಕ್ಕೆ ಅವಕಾಶವಿದೆ. ಕೆಲವು ಪ್ರಕರಣಗಳಲ್ಲಿ ಸಂಬಂಧಿಸಿದವರಿಗೆ ದಂಡ ವಿಧಿಸಲಾಗಿದೆ ಹಾಗೂ ಶಿಕ್ಷೆಗೆ ಗುರಿಪಡಿಸಲಾಗಿದೆ. ರಾಣೆಬೆನ್ನೂರ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗೆ ಎರಡು ಲಕ್ಷ ರೂ. ದಂಡ ವಿಧಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ಸಹಿಸುವುದಿಲ್ಲ. -ಎಂ.ಶಿವಣ್ಣ(ಕೋಟೆ), ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ