Advertisement

Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ

12:08 PM Jul 26, 2024 | Team Udayavani |

ಮಾನ್ವಿ (ರಾಯಚೂರು): ತುಂಗಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ತಾಲೂಕಿನ ಚಿಕಲಪರ್ವಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ.

Advertisement

ನದಿ ದಂಡೆಯಲ್ಲಿ ಮೊಸಳೆ ಓಡಾಡುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಜನರು ಹಾಗೂ ರೈತರು ತಮ್ಮ ಜಾನುವಾರುಗಳನ್ನು ನದಿಯಲ್ಲಿ ನೀರು ಕುಡಿಸುವುದಕ್ಕೆ ಹೋಗಲು ಭಯಪಡುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಮೊಸಳೆಗಳನ್ನು ಸ್ಥಳಾಂತರಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

ಇತ್ತೀಚಿಗೆ ಮೊಸಳೆ ಆಕಳ ಕರುವಿನ ಮೇಲೆ ದಾಳಿ ಮಾಡಿದ್ದು, ಕೂಡಲೇ ಹೆಚ್ಚಿನ ಅನಾಹುತಗಳನ್ನು ತಪ್ಪಿಸುವುದಕ್ಕಾಗಿ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next