Advertisement

Manvi: ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ಬಿದ್ದ ಬಸ್; 45ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

03:40 PM Aug 04, 2024 | Team Udayavani |

ಮಾನ್ವಿ: ಚಾಲಕನ ನಿಯಂತ್ರಣ ತಪ್ಪಿ ಬಸ್‌ ವೊಂದು ಜಮೀನಿಗೆ ಉರುಳಿ ಬಿದ್ದು 45ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ  ತಾಲೂಕಿನ ನಸ್ಲಾಪುರ ಗ್ರಾಮದ ಬಳಿ ನಡೆದಿದೆ.

Advertisement

ಗಾಯಗೊಂಡ 45 ಪ್ರಯಾಣಿಕರಲ್ಲಿ 8ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗಳಾದವರಿಗೆ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾನ್ವಿಯಿಂದ ಗಂಗಾವತಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಸಿಂಧನೂರು ಮತ್ತು ಗಂಗಾವತಿಗೆ ತೆರಳುತ್ತಿದ್ದ ಬಹುತೇಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next