Advertisement

ಮಾನ್ವಿ ಪುರಸಭೆ ಮುಖ್ಯಾಧಿಕಾರಿ ವಜಾಕ್ಕೆ ಆಗ್ರಹ

07:21 PM Nov 01, 2019 | Naveen |

ಮಾನ್ವಿ: ಪಟ್ಟಣದ ಜನತೆಯ ಬಹು ನಿರೀಕ್ಷಿತ ಕುಡಿಯುವ ನೀರಿನ ಕೆರೆ ಕಾಮಗಾರಿ ಪೂರ್ಣಗೊಳಿಸಲು ನಿರ್ಲಕ್ಷ್ಯ ತೋರಿದ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದ ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮೀ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಜನಶಕ್ತಿ ಕೇಂದ್ರ ಸಂಘಟನೆ ಪ್ರಧಾನ ಸಂಚಾಲಕ ಪ್ರಭುರಾಜ ಕೊಡ್ಲಿ ಒತ್ತಾಯಿಸಿದರು.

Advertisement

ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರಿನ ಕೆರೆ ಕಾಮಗಾರಿ ಉಸ್ತುವಾರಿ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಿಯಲ್‌ ಎಸ್ಟೇಟ್‌ ಮಾಡುವ ವ್ಯಕ್ತಿಗಳ ಜೊತೆ ಶಾಮೀಲಾಗಿ ನಿಯಮ ಬಾಹಿರವಾಗಿ ಪಟ್ಟಣದ ಸುತ್ತಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ಲಾಟ್‌ಗಳನ್ನು ಲಂಚ ಪಡೆದು ಅಕ್ರಮವಾಗಿ ಮುಟೇಷನ್‌ ಮಾಡಿದ್ದಾರೆ. ಬಾಪುರು ಗ್ರಾಮದ ವ್ಯಾಪ್ತಿಗೆ ಬರುವ ಭೂಮಿಯನ್ನು ಮುಟೇಷನ್‌ ಮಾಡಿ, ಅದರಲ್ಲಿ ತಮ್ಮ ತಾಯಿ ಹೆಸರಿನಲ್ಲಿ ಎರಡು ಪ್ಲಾಟ್‌ಗಳನ್ನು ಪಡೆದುಕೊಂಡಿದ್ದಾರೆ. ಮತ್ತು ಭೂ ಮಾಲೀಕರಿಂದ ಲಕ್ಷಾಂತರ ರೂ. ಲಂಚ ಪಡೆದಿದ್ದಾರೆ. ಪಟ್ಟಣದ ಪುರಸಭೆಯ ವಾಣಿಜ್ಯ ಮಳಿಗೆಗಳನ್ನು ಹರಾಜು ಕರೆಯದೆ ಮಳಿಗೆಯಲ್ಲಿರುವ ಮಾಲೀಕರಿಂದ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕೂಡಲೇ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಆದ್ದರಿಂದ ಕೂಡಲೇ ಸಂಬಂಧಪಟ್ಟ ಗುತ್ತಿಗೆದಾರರ ಮತ್ತು ಅಧಿಕಾರಿಗಳ ಸಭೆ
ಕರೆದು ಕುಡಿಯುವ ನೀರಿನ ಕೆರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚಿಸಬೇಕು. ಇಲ್ಲದಿದ್ದಲ್ಲಿ ಡಿ.6ರಂದು ಪುರಸಭೆ ಎದುರು ಚರಂಡಿ ಮತ್ತು ಸಗಣಿ ನೀರನ್ನು ಮೈಮೇಲೆ ಸುರಿದುಕೊಂಡು ಪ್ರತಿಭಟನೆ ಮಾಡಲಾಗುತ್ತದೆ.

ನಂತರ ಡಿ.14ರಿಂದು ಆಮರಣ ಉಪವಾಸ ಸತ್ಯಾಗ್ರಹ, ಜನವರಿ 4ರಂದು ಅನಿರ್ದಿಷ್ಟಾವಧಿ ಬಂದ್‌ಗೆ ಮೂಲಕ ಹಂತ-ಹಂತ ಹೋರಾಟ ಮಾಡಲಾಗುವುದು ಎಂದರು.

ಜನಶಕ್ತಿ ಕೇಂದ್ರದ ಪ್ರಧಾನ ಸಂಚಾಲಕ ಪ್ರಭುರಾಜ ಕೊಡ್ಲಿ, ಎಸ್‌.ಎಂ.ಶಾಹನವಾಜ್‌, ಮೈನೂದ್ದೀನ್‌, ಸಾಬೀರ ಪಾಷಾ, ನುಸ್ರತ್‌, ಈರಣ್ಣ ಗವಿಗಟ್‌, ಹನುಮಂತ ಕೋಟೆ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next