Advertisement

ತಾಲೂಕಿನ ಸರ್ವತೋಮುಖ ಅಭಿವೃದ್ಧಿಯೇ ಗುರಿ: ನಾಯಕ

04:56 PM May 15, 2020 | Naveen |

ಮಾನ್ವಿ: ತಾಲೂಕಿನ ಬಹುದಿನಗಳ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸುತ್ತಿದ್ದು, ತಾಲೂಕಿನ ಸರ್ವತೋಮುಖ ಅಭಿವೃದ್ಧಿ ಗುರಿ ಹೊಂದಿದ್ದೇವೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

Advertisement

ಪಟ್ಟಣದ ಎಲ್‌ಐಸಿ ನೂತನ ಕಚೇರಿ ಹತ್ತಿರ ಈಶಾನ್ಯ ಸಾರಿಗೆ ಸಂಸ್ಥೆ ಘಟಕದ ನೂತಕ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾವು ಶಾಸಕರಾಗಿ ಎರಡು ವರ್ಷಗಳಾಗಿದ್ದು, ಕಳೆದ 20 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಜನರ ಬೇಡಿಕೆಗಳನ್ನು ಒಂದೊಂದಾಗಿ ಈಡೇರಿಸಲಾಗುತ್ತಿದೆ. ಸರ್ವತೋಮುಖ ಅಭಿವೃದ್ಧಿಗೆ ಸಮಯ ಬೇಕಾಗುತ್ತದೆ. ಅಲ್ಲದೆ ಸಮುದಾಯಗಳು, ಸಂಘಟನೆಗಳು, ತಾಲೂಕಿನ ಪ್ರಜ್ಞಾವಂತರು ಸಲಹೆ ಮತ್ತು ಸಹಕಾರ ನೀಡಬೇಕು ಎಂದು ಹೇಳಿದರು.

ಚೀಕಲಪರ್ವಿ ರಸ್ತೆ, ಅಡವಿಅಮರೇಶ್ವರ ರಸ್ತೆ, ಪಟ್ಟಣದ ಕುಡಿಯುವ ನೀರಿನ ಕೆರೆ, ಶುದ್ಧೀಕರಣ ಘಟಕಗಳು, ಸಿರವಾರ ಮತ್ತು ಮಾನ್ವಿಯಲ್ಲಿ ನೂರಾರು ಕೋಟಿ ರೂ. ವೆಚ್ಚದಲ್ಲಿ ಸಿಸಿರಸ್ತೆ ಕಾಮಗಾರಿಗಳು ಚಾಲ್ತಿಯಲ್ಲಿವೆ. ಇನ್ನೂ ಮುಂದಿನ ದಿನಗಳಲ್ಲಿ ಜಾತಿ, ಧರ್ಮಗಳ ತಾರತಮ್ಯವಿಲ್ಲದೆ ಎಲ್ಲ ಅಭಿವೃದ್ಧಿ ಮಾಡಿ ಜನರ ಋಣ ತೀರಿಸಲಾಗುವುದು ಎಂದು ಹೇಳಿದರು.

ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಕುಡಿಯುವ ನೀರಿನ ಶುದ್ಧೀಕರಣ ಘಟಕ ಉದ್ಘಾಟಿಸಿದರು. ಸಾರಿಗೆ ಘಟಕದ ವ್ಯವಸ್ಥಾಪಕ ಮಹೇಂದ್ರರಾಜ್‌ ಉಭಾಳೆ, ಜೆಡಿಎಸ್‌ ತಾಲೂಕು ಅದ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ನಗರ ಘಟಕಾಧ್ಯಕ್ಷ ಖಲೀಲ್‌ ಖುರೇಷಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಜಂಬೂನಾಥ ಯಾದವ, ಜೆಡಿಎಸ್‌ ವಕ್ತಾರ ನಾಗರಾಜ ಭೋಗಾವತಿ, ಪ್ರಧಾನ ಕಾರ್ಯದರ್ಶಿ ಜೆ.ಎಚ್‌. ದೇವರಾಜ, ಯುವ ಮುಖಂಡ ರಾಜಾರಾಮಚಂದ್ರ ನಾಯಕ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next