Advertisement

Prem- Manvita ; ಅಪ್ಪಾ ಐ ಲವ್‌ ಯು ಏ.12ಕ್ಕೆ ತೆರೆಗೆ

12:34 PM Apr 07, 2024 | Team Udayavani |

ಪ್ರೇಮ್‌ ನಾಯಕರಾಗಿರುವ “ಅಪ್ಪಾ ಐ ಲವ್‌ ಯು’ ಚಿತ್ರ ಏ.12ಕ್ಕೆ ತೆರೆಕಾಣುತ್ತಿದೆ. ಟಗರು ಚಿತ್ರ ಖ್ಯಾತಿಯ ನಟಿ ಮಾನ್ವಿತಾ ಹರೀಶ್‌ ಪ್ರೇಮ್‌ಗೆ ಜೋಡಿ ಆಗಿದ್ದಾರೆ. ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಮಾಧ್ಯಮ ಮುಂದೆ ಬಂದ ಚಿತ್ರತಂಡ ಚಿತ್ರದ ಮಾಹಿತಿ ಹಂಚಿಕೊಂಡಿತು.

Advertisement

ಈ ವೇಳೆ ನಟ ಪ್ರೇಮ್‌ ಮಾತನಾಡಿ, ಸಾಮಾನ್ಯವಾಗಿ ಎಲ್ಲಾ ತಂದೆಯರು ಎಲ್ಲರಿಗೂ ಹೀರೋ. ಎಷ್ಟೇ ಬಲಹೀನ ಅಗಿದ್ದರೂ ಸಹ ರಸ್ತೆಯಲ್ಲಿ ಜಗಳ ಮಾಡಿ ಹೊಡೆದರು. ಮಕ್ಕಳ ಬಾಯಲ್ಲಿ ಬರುವ ಮಾತು ಎಂದರೆ ಅಪ್ಪನಿಗೆ ಹೇಳ್ತೀನಿ ಅಂತಾ. ಅಪ್ಪನಿಗೆ ಹೋಗಿ ಹೇಳುತ್ತಾರೆ. ನನ್ನ ತಂದೆ ನನಗೆ ಹೀರೋ. ನಾನು ಪ್ಲೇಬ್ಯಾಕ್‌ ಸಿಂಗರ್‌ ಆಗಲು ಇಷ್ಟಪಟ್ಟಿದೆ. ಯಾರಾದರೂ ಏನ್‌ ಆಗ್ತೀಯಾ ಎಂದು ಕೇಳಿದರೆ ನಾನು ಸಿಂಗರ್‌ ಆಗ್ತೀನಿ ಎನ್ನುತ್ತಿದ್ದೆ. ನಾನು ಚಿಕ್ಕವನು ಇದ್ದಾಗ ಎಲ್ಲಾ ರೀತಿ ಹುಡುಗರ ಸಹವಾಸ ಮಾಡುತ್ತಿದ್ದೆ. ಆದರೆ ನಮ್ಮ ಅಪ್ಪ ಎಂದು ಡೌಟ್‌ ಪಡಲೇಇಲ್ಲ. ನನ್ನ ಮಗ ಏನು ಅಂತ ಗೊತ್ತು ಎಂದಿದ್ದರು. ಹೀಗಾಗಿ ನಾನು ಕೆಟ್ಟ ದಾರಿ ತುಳಿಯಲಿಲ್ಲ. ನನಗೆ ಕ್ಲೈಮ್ಯಾಕ್ಸ್‌ ಬಹಳ ಕನೆಕ್ಟ್ ಆಯ್ತು. ನನಗೆ ಸಿಕ್ಕಿರುವ ಪಾತ್ರ ಬಹಳ ಅದ್ಭುತ ಪಾತ್ರ. ನನಗೋಸ್ಕರ ಹುಡುಕಿ ಬಂದ ಪಾತ್ರ. ಹೀಗಾಗಿ ಸಿನಿಮಾ ಒಪ್ಪಿಕೊಂಡೆ’ ಎಂದರು.

ನಿರ್ದೇಶಕ ಅಥರ್ವ್‌ ಆರ್ಯ ಮಾತನಾಡಿ, “ನಾವು ಹೆಡ್‌ಲೈನ್‌ ಹಾಕಿರುವ ಹಾಗೆ ಇದು ಕಾಲ್ಪನಿಕ ಕಥೆಯಲ್ಲ. ಅಪ್ಪ ಎಂಬ ದೇವರ ಸತ್ಯ ಕಥೆ. ಕಾಲ್ಪನಿಕ ಕಥೆ ಮಾಡುವುದು ಸುಲಭ. ಆದರೆ ನಮ್ಮ ನಿಮ್ಮ ನಡುವೆ ನಡೆಯುವ, ಸಮಾಜದಲ್ಲಿ ವಾಸ್ತವವಾಗಿ ನಡೆಯುವ ಕಥೆಗಳನ್ನು ಎಷ್ಟೋ ಬಾರಿ ಮೆರೆತುಬಿಟ್ಟಿರುತ್ತೇವೆ. ಆದರೆ ನಾವು ಅದನ್ನು ಅನುಭವಿಸುತ್ತಿರುತ್ತೇವೆ. ಅದು ಜೀವನದ ಭಾಗವಾಗಿರುತ್ತದೆ. ಅಂತಹ ಕಥೆಗಳನ್ನು ತೆರೆಮೇಲೆ ತರಬೇಕು ಎಂದು ಅಪ್ಪಾ ಐ ಲವ್‌ ಯೂ ಕಥೆಯನ್ನು ಆಯ್ಕೆ ಮಾಡಿಕೊಂಡೆವು. ಕಥೆ ಹುಟ್ಟಲು ನಾಣಿ ಅವರು ಮೂಲ ಕಾರಣ. ಸಿನಿಮಾವಾಗಲೂ ಅವರೇ ಕಾರಣ. ಅಪ್ಪ ಸಂಸಾರಕ್ಕೆ ಸಮಾಜಕ್ಕೆ ಎಷ್ಟು ಮುಖ್ಯ ಎಂಬುದು ನಾವು ಅಪ್ಪ ಆದಾಗ ಗೊತ್ತಾಗುತ್ತದೆ. ಅಪ್ಪನ ಮಹತ್ವ ಸಾರುವ ಚಿತ್ರ ಇದೇ 12ನೇ ತಾರೀಖು ತೆರೆಗೆ ಬರಲಿದೆ’ ಎಂದರು.

ಚಿತ್ರದ ಬಗ್ಗೆ ಮಾತನಾಡುವ ಅವರು ತಬಲಾ ನಾಣಿ, “ಕಿನ್ನಾಳ್‌ ರಾಜ್, ಈ ಸಿನಿಮಾಗೆ ಅದ್ಭುತ ಹಾಡು ಕೊಟ್ಟಿದ್ದಾರೆ. ಕಿನ್ನಾಳ್‌ ರಾಜ್‌ ಕೆಜಿಎಫ್ ಸಾಂಗ್‌ ಒಂದು ರೀತಿಯಾಯ್ತು. ನಮ್ಮ ಚಿತ್ರದಲ್ಲಿ ಅವರು ಬರೆದಿರುವ ಹಾಡನ್ನು ಆಡುವಾಗ ವಿಜಯ್‌ ಪ್ರಕಾಶ್‌ ಕಣ್ಣೀರಾದರು. ಅಂತಹ ಸಾಹಿತ್ಯ. ಅದಕ್ಕೆ ತಕ್ಕನಾದ ಟ್ಯೂನ್‌ ಆಕಾಶ್‌ ಕೊಟ್ಟಿದ್ದಾರೆ. ವಿಜಯ್‌ ಚೆಂಡೂರು ಒಳ್ಳೆ ಪಾತ್ರ ಮಾಡಿದ್ದಾರೆ’ ಎಂದರು.

ಪ್ರೇಮ್‌ ಹಾಗೂ ಮಾನ್ವಿತಾ ಕಾಮತ್‌ ಜೊತೆಗೆ ಸಂಜಯ್, ಜೀವಿತಾ, ರಂಗಿತರಂಗ ಅರವಿಂದ್‌, ವಿಜಯ್‌ ಚೆಂಡೂರ್‌, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್‌ ತೀರ್ಥಹಳ್ಳಿ, ಗಿರೀಶ್‌ ಜತ್ತಿ, ಪಟೇಲ್‌ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.

Advertisement

ಚಿತ್ರಕ್ಕೆ ಆಕಾಶ್‌ ಪರ್ವ ಸಂಗೀತ ಒದಗಿಸಿದ್ದಾರೆ . ಕೆಜಿಎಫ್ ಕಿನ್ನಾಳ್‌ ರಾಜ್, ಕವಿರಾಜ್, ವಿ.ನಾಗೇಂದ್ರ ಪ್ರಸಾದ್, ಕೆ.ಕಲ್ಯಾಣ್‌ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ನಾಗಾರ್ಜುನ್‌ ಆರ್.ಡಿ. ಛಾಯಾಗ್ರಹಣ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next