Advertisement
ದೀಪಾವಳಿ ಹಬ್ಬಕ್ಕೆ ದಿನಗಣನೆ ಆರಂಭವಾಗು ತ್ತಿದ್ದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರೂಪಿಸಿರುವ ಹಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿ ರಾಜ್ಯ ಪೌರಾಡಳಿತ ನಿರ್ದೇಶನಾಲಯ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಿದ್ದು ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದೆ.
ಹಸುರು ಪಟಾಕಿ ಪ್ಯಾಕೆಟ್‌ಗಳನ್ನು ರ್‍ಯಾಂಡಮ್ ಆಗಿ ಸಂಗ್ರಹಿಸಿ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು. ನಿಗದಿತ ಗುಣಮಾಪನಗಳಿಗೆ ಸರಿ ಹೊಂದದಿದ್ದಲ್ಲಿ ಅವುಗಳನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಹಸುರು ಪಟಾಕಿಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು ಎಂದು ರಾಜ್ಯ ಸರಕಾರ ನಿರ್ದೇಶಿಸಿದೆ. ಪ್ರಮುಖ ಸೂಚನೆಗಳು
ಹೊರರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತಮ್ಮ ತನಿಖಾ ಠಾಣೆಗಳ ಮೂಲಕ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಬೇಕು. ಸಾಗಾಟ ಮಾಡುವ ವಾಹನಗಳನ್ನೂ ಸಾರಿಗೆ ಇಲಾಖೆ ಮುಟ್ಟುಗೋಲು ಹಾಕಬೇಕು ಎಂದು ಸೂಚನೆ ನೀಡಲಾಗಿದೆ.
Related Articles
ದೀಪಾವಳಿ ವೇಳೆ ಪರಿಸರ ಮಾಲಿನ್ಯ ಹಾಗೂ ಶಬ್ದ ಹಾಗೂ ವಾಯು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಿತ ನಾಗರಿಕರು ಮತ್ತು ಸರಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸಿ ತಮ್ಮ ವ್ಯಾಪ್ತಿಯ ಎಲ್ಲ ಪಟಾಕಿ ಮಾರಾಟಗಾರರ ಗೋದಾಮು ಪರಿಶೀಲಿಸಬೇಕು. ಅಲ್ಲಿ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಗೋದಾಮನ್ನು ಮುಟ್ಟು ಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಆದೇಶಿಸಲಾಗಿದೆ.
Advertisement
ಹಸುರು ಪಟಾಕಿಯಲ್ಲಿ ಕ್ಯುಆರ್ಕೋಡ್ಎಲ್ಲ ಹಸುರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸುರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇರುತ್ತದೆ. ಈ ಚಿಹ್ನೆಯ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತಪಡಿಸಿಕೊಳ್ಳಬೇಕು. ಚಿಹ್ನೆ ಇಲ್ಲದ ಯಾವುದೇ ಪಟಾಕಿಗಳನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿ ರಾಜು ತಿಳಿಸಿದ್ದಾರೆ. ನಿಯಮ ಪಾಲನೆ ಕಡ್ಡಾಯ
ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಸಿಡಿಮದ್ದುಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಬಗ್ಗೆ ರಾಜ್ಯಸರಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದು ಜಿಲ್ಲೆಯಲ್ಲಿಯೂ ಕಟ್ಟುನಿಟ್ಟಾಗಿ ಪಾಲನೆಯಾಗಲಿದೆ. ನಿಯಮ ಉಲ್ಲಂ ಸಿ ಪಟಾಕಿ ಸಿಡಿಸಿದ್ದೇ ಆದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ ಅಥವಾ ಸ್ಥಳೀಯ ಠಾಣೆಗೆ ಮಾಹಿತಿ ನೀಡಬಹುದು.
-ಡಾ| ಕೆ. ವಿದ್ಯಾಕುಮಾರಿ, ಜಿಲ್ಲಾಧಿಕಾರಿ