ತುಮಕೂರು: ಜಾತಿ, ಮತ, ಧರ್ಮ ಬೇಧವಿಲ್ಲದೇ ನಾಡಿನ ವಿವಿಧ ಸಂಪ್ರದಾಯಗಳ ಮಠಾಧೀಶರು, ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ ಧರ್ಮದ ಪ್ರಮುಖರು, ರಾಜಕೀಯ ಮುಖಂಡರು ಡಾ.ಶಿವಕುಮಾರ ಸ್ವಾಮೀಜಿಯವರ ಲಿಂಗಕಾಯದ ಅಂತಿಮ ದರ್ಶನ ಪಡೆದರು.
ಯೋಗಗುರು ಬಾಬಾ ರಾಮದೇವ್, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಬೇಲಿಮಠದ ಶಿವರುದ್ರ ಸ್ವಾಮೀಜಿ, ತರಳಬಾಳು ಸ್ವಾಮೀಜಿ, ರಂಭಾಪುರಿ ಸ್ವಾಮೀಜಿ, ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ, ಮುರುಘಾ ಶರಣರು, ಜಯ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ, ಸಂತೋಷ್ ಗುರೂಜಿ, ವಿರೇಶಾ ನಂದ ಸರಸ್ವತಿ ಸ್ವಾಮೀಜಿ, ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಪಟ್ಟನಾಯಕ ಹಳ್ಳಿ ನಂಜಾವಧೂತ ಸ್ವಾಮೀಜಿ, ಗದ್ದಿಗೆ ಮಠದ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿ ಬಹುತೇಕ ಮಠದ ನೂರಕ್ಕೂ ಅಧಿಕ ಸ್ವಾಮಿಗಳು, ಸಂತರು, ಸಾಧ್ವಿಗಳು ಅಂತಿಮ ದರ್ಶನ ಪಡೆದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಡಿ.ವಿ.ಸದಾನಂದಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ಡಿ.ಕೆ. ಶಿವಕುಮಾರ್, ಜಿ.ಟಿ.ದೇವೇಗೌಡ, ಜಮೀರ್ ಅಹ್ಮದ್, ಸಾ.ರಾ.ಮಹೇಶ್, ಜಯಮಾಲಾ, ಸಂಸದರಾದ ಶೋಭಾ ಕರಂದ್ಲಾಜೆ, ಉಗ್ರಪ್ಪ, ಸಿದ್ಧೇಶ್ವರ, ಮುದ್ದಹನುಮೇಗೌಡ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಶ್ರೀರಾಮುಲು, ಲಕ್ಷ್ಮೀ ಹೆಬ್ಟಾಳ್ಕರ್, ಮಾಧುಸ್ವಾಮಿ, ಜ್ಯೋತಿ ಗಣೇಶ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿ ಶಾಸಕರು, ಸಂಸದರು, ವಿವಿಧ ಪಕ್ಷಗಳ ಮುಖಂಡರು ಅಂತಿಮ ದರ್ಶನದಲ್ಲಿ ಭಾಗಿಯಾಗಿದ್ದರು.
ನಟರಾದ ದರ್ಶನ್, ಪುನೀತ್ ರಾಜ್‌ಕುಮಾರ್, ಜಗ್ಗೇಶ್, ಸುದೀಪ್, ವಿಜಯ ರಾಘವೇಂದ್ರ, ರಾಘವೇಂದ್ರ ರಾಜ್‌ಕುಮಾರ್ ಸಹಿತವಾಗಿ ಚಿತ್ರರಂಗದ ಗಣ್ಯರು ಆಗಮಿಸಿದ್ದರು. ಆರ್‌ಎಸ್‌ಎಸ್ ಪ್ರಮುಖರಾದ ವಿ.ನಾಗರಾಜ್, ತಿಪ್ಪೇಸ್ವಾಮಿ ಮತ್ತಿತರರು ಅಂತಿಮ ದರ್ಶನ ಪಡೆದಿದ್ದರು.
ಭಾರತರತ್ನ’ಕ್ಕೆರಾಮ್‌ದೇವ್ ಮನವಿ
ಕರ್ಮಯೋಗಿಯಾಗಿ ಬದುಕಿ ಲಕ್ಷಾಂತರ ಕುಟುಂಬಗಳಿಗೆ ದಾರಿ ದೀಪವಾಗಿದ್ದ ಡಾ.ಶಿವಕುಮಾರ ಸ್ವಾಮೀಜಿಯವರು ಭಾರತ ರತ್ನಕ್ಕೆ ಅರ್ಹರಾಗಿದ್ದಾರೆ. ಇವರಿಗೆ ಭಾರತ ರತ್ನ ನೀಡುವುದರಿಂದ ಭಾರತ ರತ್ನಕ್ಕೆ ಸೂಕ್ತ ಗೌರವ ಬರುತ್ತದೆ. ಹೀಗಾಗಿ ಶ್ರೀಗಳಿಗೆ ಭಾರತ ರತ್ನ ಗೌರವ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಯೋಗಗುರು ಬಾಬಾ ರಾಮ್‌ದೇವ್ ಹೇಳಿದರು.