Advertisement

Mysuru: ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಕೋಮು ಘರ್ಷಣೆ

10:33 PM Jan 29, 2024 | Team Udayavani |

ಮೈಸೂರು :ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಸೋಮವಾರ ರಾತ್ರಿ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.

Advertisement

ಘರ್ಷಣೆ ವೇಳೆ ಮನೆಗಳಿಗೆ ಕಲ್ಲು ತೂರಾಟ ನಡೆಸಲಾಗಿದ್ದು ಮನೆ ಮುಂದೆ ನಿಲ್ಲಿಸಿದ್ದ ಹಲವು ವಾಹನಗಳು ಜಖಂಗೊಂಡಿವೆ.

ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆಸಲಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ.

ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next