Advertisement

ಮಹಿಳಾ ಸಬಲೀಕರಣಕ್ಕೆ ಅನೇಕ ಯೋಜನೆ; ವಿಜಯಲಕ್ಷ್ಮೀ

06:02 PM Jul 20, 2022 | Team Udayavani |

ಚಿಕ್ಕೋಡಿ: ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ವಿಜಯಲಕ್ಷ್ಮೀ ಉಕುಮನಾಳ ಹೇಳಿದರು.

Advertisement

ಚಿಕ್ಕೋಡಿ ಜಿಲ್ಲಾ ಮಹಿಳಾ ಮೋರ್ಚಾ ಕೇಶವ ಕಲಾ ಭವನದಲ್ಲಿ ಆಯೋಜಿಸಿದ್ದ ಎರಡು ದಿನಗಳ ಪ್ರಶಿಕ್ಷಣ ವರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರದ ಈ ಯೋಜನೆಗಳ ಲಾಭ ಪಡೆದುಕೊಂಡ ಸಾವಿರಾರು ಮಹಿಳೆಯರು ಯಶಸ್ವಿ ಉದ್ಯಮಿಗಳಾಗಿ, ವ್ಯಾಪಾರಿಗಳಾಗಿ ಹೊರಹೊಮ್ಮಿದ್ದಾರೆ. ಸ್ವಾತಂತ್ರ್ಯ ನಂತರದ 75 ವರ್ಷಗಳಲ್ಲಿ ಇದೇ ಪ್ರಥಮ ಬಾರಿಗೆ ಆದಿವಾಸಿ ಮಹಿಳೆಯೊಬ್ಬರನ್ನು ರಾಷ್ಟ್ರದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿಸಿದ್ದಷ್ಟೇ ಅಲ್ಲ, ಅವರು ಅತೀ ಹೆಚ್ಚು ಮತಗಳ ಅಂತರದಿಂದ ಆಯ್ಕೆಯಾಗುವಂತೆ ತಂತ್ರಗಾರಿಕೆ ಕೂಡ ರೂಪಿಸಿದೆ ಎಂದರು. ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ| ರಾಜೇಶ್‌ ನೇರ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಲ್ಕು ದಶಕಗಳ ಹೋರಾಟದಿಂದ ಇಂದು ಬಿಜೆಪಿ ಈ ಸ್ಥಾನಕ್ಕೇರಲು ಸಾಧ್ಯವಾಗಿದೆ.

ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ದೇಶದ ಮಹಿಳೆಯರು ಸಕ್ರೀಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲ ಪಡಿಸಬೇಕು ಎಂದು ಕರೆ ನೀಡಿದ ಅವರು, ಬೂತ್‌ ಮಟ್ಟದ ಮಹಿಳಾ ಕಾರ್ಯಕರ್ತರನ್ನು ಜೋಡಿಸಿಕೊಂಡು ತಳ ಮಟ್ಟದಲ್ಲಿ ಸಂಘಟನೆಯನ್ನು ಬಲಗೊಳಿಸೋಣ ಎಂದರು.

ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ ಮಾತನಾಡಿ, ಬಿಜೆಪಿಯಲ್ಲಿ ಮಹಿಳೆಯರನ್ನು ಮಾತೆ, ಸಹೋದರಿ ಸ್ಥಾನದಲ್ಲಿ ನೋಡುವ ದೃಷ್ಟಿಕೋನವೇ ನಮ್ಮ ಕಾರ್ಯ ಕ್ಷಮತೆ ಹೆಚ್ಚಿಸುತ್ತದೆ. ಭಾರತದಲ್ಲಿ ಅನೇಕ ಮಹಿಳಾ ಮಣಿಗಳು ದೇಶದ ಸ್ವತಂತ್ರ್ಯಕ್ಕಾಗಿ ಹೋರಾಟ ಮಾಡಿರುವುದನ್ನು ನಾವು ಸ್ಮರಿಸಬೇಕು.

Advertisement

ಪ್ರಧಾನಿ ಮೋದಿ ಅವರು ಮಹಿಳೆಯರಿಗೂ ಉನ್ನತ ಸ್ಥಾನ ನೀಡಿದ್ದು ಆ ನಿಟ್ಟಿನಲ್ಲಿ ನಾವು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಿರಂತರ ಶ್ರಮಿಸೋಣ ಎಂದರು. ಚಿಕ್ಕೋಡಿ ಬಿಜೆಪಿ ಮಹಿಳಾ ಮೋರ್ಚಾ ಅದ್ಯಕ್ಷೆ ಶಾಂಭವಿ ಅಶ್ವಥಪೂರ ಪ್ರಾಸ್ತಾವಿಕವಾಗಿ ಮಾತನಾಡಿ, ಬಿಜೆಪಿ ಒಂದು ವಿಭಿನ್ನ ಪಕ್ಷ. ಆ ನಿಟ್ಟಿನಲ್ಲಿ ಬಿಜೆಪಿಯಲ್ಲಿ ರಾಜಕಾರಣಕ್ಕಾಗಿ ಮಾತ್ರವಲ್ಲದೆ ದೇಶ ಸೇವೆಗಾಗಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದಾಗಿದೆ ಎಂದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ಡಾ| ಜ್ಯೋತಿ ಚಿಂಚನಿಕರ್‌, ವಿಜಯಲಕ್ಷ್ಮಿ ಹಮೀದಖಾನೆ, ಅರ್ಚನಾ ಪಡದಾಳೆ, ಪ್ರಕಾಶ ಅಕ್ಕಲಕೋಟ ಉಪಸ್ಥಿತರಿದ್ದರು. ಶಿಲ್ಪಾ ಇಂಚಲ್‌ ಸ್ವಾಗತಿಸಿದರು. ದೀಪಾಲಿ ಪಾಟೀಲ ನಿರೂಪಿಸಿದರು, ಗೀತಾ ಮೂರ್ತುಲೆ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next