Advertisement

ಜೀವನ ಕಸಿದ ಮಳೆ..; ವರುಣಾರ್ಭಟಕ್ಕೆ ನೆಲಸಮವಾಗುತ್ತಿದೆ ಸಾಲು ಸಾಲು ಮನೆಗಳು

10:41 AM Aug 13, 2022 | Team Udayavani |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ಬಾರಿಯ ಮಳೆ ಹಲವರ ಜೀವನ ಕಸಿದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಹಲವು ಮನೆಗಳು ನೆಲಸಮವಾಗಿದೆ.

Advertisement

ಮೂಡಿಗೆರೆ ತಾಲೂಕಿನ ದಿಣ್ಣೆಕೆರೆಯಲ್ಲಿ ಒಂದು ಮನೆ ನೆಲಸಮವಾಗಿದೆ. ಇಲ್ಲಿನ ದಿನೇಶ್ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ನಾಶವಾಗಿದೆ. ನೆಲ ಸೇರಿದ ಮನೆಯ ಅವಶೇಷಗಳ ಅಡಿಯಲ್ಲಿ ಆಹಾರ ಸಾಮಗ್ರಿ, ಕೂಡಿಟ್ಟ ಹಣ ಹುಡುಕುವ ಮನಕಲಕುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮನೆ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.

ಕಳಸ ತಾಲೂಕಿನ ಕೆಳಗೂಡು ಗ್ರಾಮದಲ್ಲಿ ಹರೀಶ್ ಎಂಬುವರ ಮನೆ ಮೇಲ್ಚಾವಣಿ ಮತ್ತು ಗೋಡೆ ಕುಸಿತವಾಗಿದೆ. ತರೀಕೆರೆ ತಾಲೂಕಿನಲ್ಲೂ ಮತ್ತೆ ಮೂರು ಮನೆಗಳ ಗೋಡೆ ಕುಸಿತವಾಗಿದೆ. ಬಾವಿಕೆರೆ ಗ್ರಾಮದ ಬಸಪ್ಪ ಹಾಗೂ ಗಂಗಣ್ಣ ಎಂಬವರಿಗೆ ಸೇರಿದ ಮನೆಗಳಿಗೆ ಮತ್ತು ಬಿ.ರಾಮನಹಳ್ಳಿ ಗ್ರಾಮದ ದುರ್ಗಮ್ಮ ಎಂಬುವರ ಮನೆ ಗೋಡೆಯೂ ಹಾನಿಯಾಗಿದೆ.

ತೀವ್ರ ಮನೆಯಿಂದ ಹಲವರು ಜೀವನಾಶ್ರಯ ಕಳೆದುಕೊಂಡಿದ್ದು, ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:3 ವರ್ಷದಲ್ಲಿ 36000 ಕಿ.ಮೀ. ಸೈಕಲ್ ತುಳಿದ ಮಾಜಿ ಯೋಧನ ಜೊತೆ ತಿರಂಗಾ ಆಚರಿಸಿದ ಮಲೆನಾಡಿಗರು

Advertisement

ಬಾಯ್ತೆರೆದ ಕಾಂಕ್ರೀಟ್ ರಸ್ತೆ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಕಾಂಕ್ರೀಟ್ ರಸ್ತೆಯಲ್ಲಿ ಬಿರುಕು ಮೂಡಿದೆ. ಹೆಬ್ಬೆ ಮತ್ತು ಕೆಮ್ಮಣ್ಣುಗುಂಡಿಗೆ ಗುಂಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಎಡಬದಿಯಲ್ಲಿ ಸುಮಾರು ಮೂರು ಅಡಿ ಕುಸಿತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next