Advertisement
ಜಿಲ್ಲೆಯಲ್ಲಿ ವಿದ್ಯಾಗಮ ಸೇರಿ 6 ರಿಂದ9ನೇ ತರಗತಿ ಗಳನ್ನು ಸ್ಥಗಿತಗೊಳಿಸಲಾಗಿದ್ದು, 10, 11 ಹಾಗೂ 12ನೇ ತರಗತಿಗಳು ಎಂದಿ ನಂತೆ ಮುಂದುವರಿಯುತ್ತವೆ. ಆದಾಗ್ಯೂ, ತರಗತಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ. ಜಿಲ್ಲೆಯಲ್ಲಿನ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳಲ್ಲಿ ಮಂಡಳಿಯ ವಿಶ್ವವಿದ್ಯಾಲಯಗಳಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣ ಹೊರತು ಪಡಿಸಿ, ಇತರೆ ಎಲ್ಲಾ ತರಗತಿಗಳನ್ನುಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ.
Related Articles
Advertisement
ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ತರಹದ ರ್ಯಾಲಿ, ಮುಷ್ಕರ, ಧರಣಿ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗದಿಪಡಿಸಿರುವ ಆಸನ ವ್ಯವಸ್ಥೆ ಮೀರುವಂತಿಲ್ಲ. ಕಚೇರಿಗಳು ಹಾಗೂ ಇತರೆ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟುಮನೆಯಿಂದಲೇ ಕೆಲಸ ನಿರ್ವಹಿಸುವ ವ್ಯವಸ್ಥೆಯನ್ನು ಪಾಲಿಸುವುದು. ಜಿಲ್ಲೆಯ ಸಿನಿಮಾ ಹಾಲ್‌ಗಳಲ್ಲಿ ಒಂದು ಸೀಟು ಬಿಟ್ಟು ಕುಳಿತುಕೊಳ್ಳುವಂತೆ ಗರಿಷ್ಠ ಶೇ.50 ವೀಕ್ಷಕರಿಗೆ ಮಾತ್ರ ಅವಕಾಶ ಕಲ್ಪಿಸುವುದು ಹಾಗೂ ಜಿಲ್ಲೆಯಲ್ಲಿನ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಗರಿಷ್ಠ ಗ್ರಾಹಕರ ಸಂಖ್ಯೆಯು ಶೇ.50 ಅನ್ನು ಮೀರುವಂತಿಲ್ಲ. ಶಾಪಿಂಗ್ ಮಾಲ್‌ಗಳು, ಮುಚ್ಚಿದ ಪ್ರದೇಶಗಳಲ್ಲಿರುವ ಮಾರ್ಕೆಟ್‌ಗಳು ಹಾಗೂ ಡಿಪಾರ್ಟ್ ಮೆಂಟಲ್ ಸ್ಟೋರ್‌ಗಳಲ್ಲಿ ಶಿಷ್ಟಾಚಾರದನ್ವಯ ಕೋವಿಡ್ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್, ದೈಹಿಕ ಅಂತರ ಪಾಲನೆ, ಹ್ಯಾಂಡ್ ಸಾನಿಟೈಸರ್, ಹ್ಯಾಂಡ್‌ವಾಷ್‌ಗಳ ಬಳಕೆ ಜಾರಿಗೊಳಿಸುವುದು ಈ ನಿಯಮ ಉಲ್ಲಂಘಿಸಿದಲ್ಲಿ ಮೇಲಿನ ಸ್ಥಳಗಳನ್ನು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಮುಚ್ಚಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ ಮಹೋತ್ಸವಗಳು, ಮೇಳಗಳು, ಗುಂಪು ಸೇರುವುದರ ನಿಷೇಧ ಮುಂದುವರಿಯುತ್ತದೆ.
ಕೋವಿಡ್ ವೈರಸ್‌ನಿಂದಾಗಿ ಮುಚ್ಚಲ್ಪಟ್ಟ ಕ್ಷೇತ್ರ : ಧಾರ್ಮಿಕ ಸ್ಥಳಗಳಲ್ಲಿ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಲು ಮಾತ್ರ ಅವಕಾಶವಿದ್ದು, ಗುಂಪು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ. ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ, ಸಾಮಾನ್ಯವಾಗಿನಿವಾಸಿಗಳು/ಜನರು ಸೇರುವ ಸ್ಥಳಗಳಾದ ಜಿಮ್, ಪಾರ್ಟಿ ಹಾಲ್, ಕ್ಲಬ್‌ಹೌಸ್, ಈಜುಕೊಳಗಳು ಇತ್ಯಾದಿ ಮುಚ್ಚಲ್ಪಟ್ಟಿರುತ್ತವೆ ಎಂದು ತಿಳಿಸಿದ್ದಾರೆ.