Advertisement
ಸ್ಥಾನಿಕ ಹವಾಮಾನ ಅಧ್ಯಯನಕ್ಕಾಗಿ ಮಾಹಿತಿ ಸಂಗ್ರಹಿಸಲು ಬೆಂಗಳೂರಿನ ಇಸ್ರೋ ಕೇಂದ್ರದಿಂದ ಕೆಲ ದಿನಗಳ ಹಿಂದೆ ವಿಶೇಷ ಸಾಧನವನ್ನು ಹಾರಿ ಬಿಡಲಾಗಿದೆ. ಸದರಿ ಸಾಧನ ಸ್ಥಾನಿಕ ಹವಾಮಾನ ಮಾಹಿತಿಯನ್ನು ಇಸ್ರೋ ಕೇಂದ್ರಕ್ಕೆ ರವಾನಿಸಲಿದೆ. ಹೈದರಾಬಾದ್ ಇಸ್ರೋ ನಿರ್ವಹಣಾ ಕೇಂದ್ರದಿಂದ ಈ ಸಾಧನವನ್ನು ನಿಯಂತ್ರಣ ಮಾಡಲಾಗುತ್ತಿತ್ತು.
Related Articles
Advertisement
ಆತಂಕ ಪಡಬೇಕಿಲ್ಲ: ಡಿ.ಸಿ. ಭೂಬಾಲನ್
ಪೆಲೋಡ್ ಪತನದ ಕುರಿತು ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಿಜಯಪುರ ಜಿಲ್ಲಾಧಿಕಾರಿ ಭೂಬಾಲನ್, ಕೇಂದ್ರ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿನ ಹೈದರಾಬಾದ್ ನ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆ (ಟಾಟಾ ಇನ್ ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್) ಹವಾಮಾನ ಹಾಗೂ ವಾತಾವರಣ ಅಧ್ಯಯನಕ್ಕಾಗಿ ಉಡಾವಣೆ ಮಾಡಿದ್ದ ಪೆಲೋಡ್ ಹೆಸರಿನ ಹವಾಮಾನ ಅಧ್ಯಯನಾಶೀಲ ವೈಜ್ಞಾನಿಕ ಉಪಕರಣ ಪ್ಯಾರಾಚೂಟ್ ನ ನೆರವಿನಿಂದ ಚಡಚಣ ತಾಲೂಕಿನ ಗ್ರಾಮವೊಂದರ ಜಮೀನಿನಲ್ಲಿ ಬಂದು ಇಳಿದಿದೆ ಎಂದಿದ್ದಾರೆ.
ಜಿಲ್ಲಾಡಳಿತ ಈ ಕುರಿತು ಸಂಬಂಧಿಸಿದ ಸಂಸ್ಥೆಯನ್ನು ಸಂಪರ್ಕಿಸಿ ಈಗಾಗಲೇ ಮಾಹಿತಿ ಒದಗಿಸಿದೆ. ಸಂಸ್ಥೆಯ ಅಧಿಕಾರಿಗಳ ತಂಡ ಸದ್ಯದಲ್ಲೇ ವಿಜಯಪುರಕ್ಕೆ ಆಗಮಿಸಲಿದೆ. ಜಮೀನಿನಲ್ಲಿ ಬಿದ್ದಿರುವ ಪ್ಯಾರಾಚ್ಯೂಟ್ ಹಾಗೂ ಪೆಲೋಡ್, ಅದಕ್ಕೆ ಸಬಂಧಿಸಿದ ಸಾಧನಾ ಸಲಕರಣೆಗಳನ್ನು ತೆಗೆದುಕೊಂಡು ಹೋಗಲಿದೆ ಎಂದು ತಿಳಿಸಿದ್ದಾರೆ.