Advertisement

ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಗಣಿ ಅಧಿಕಾರಿಗಳು ದಾಳಿ: ಮರಳು ವಶ

02:06 PM Mar 16, 2017 | Team Udayavani |

ಕುಂದಾಪುರ: ಹಳ್ನಾಡು ಸೇರಿದಂತೆ ತಾಲೂಕಿನ ವಿವಿಧಡೆ ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಪೊಲೀಸರ ಸಹಕಾರದೊಂದಿಗೆ  ದಾಳಿ ನಡೆಸಿದ ಗಣಿ ಇಲಾಖೆಯ ಅಧಿಕಾರಿಗಳು, ಕುಂದಾಪುರ ತಹಶೀಲ್ದಾರರು ಈ ಪ್ರದೇಶಗಳಲ್ಲಿನ ಮರಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಡಾ| ಮಹದೇಶ್ವರ, ತಹಶೀಲ್ದಾರ್‌  ಜಿ.ಎಂ. ಬೋರ್ಕರ್‌ ಅವರು ಕುಂದಾಪುರ ಪೊಲೀಸರ ಸಹ ಕಾರದಲ್ಲಿ ದಾಳಿ ನಡೆಸಿ ಮರಳುಗಾರಿಕೆ ನಡೆಸುತ್ತಿದ್ದ ಪ್ರದೇಶದಲ್ಲಿ ಶೇಖರಿಸಿ ಇಟ್ಟ ಮರಳನ್ನು  ವಶಪಡಿಸಿಕೊಂಡಿದ್ದಾರೆ. 

ಈ ಸಂದರ್ಭದಲ್ಲಿ ಮರಳುಗಾರಿಕೆ ನಡೆಸುತ್ತಿದ್ದವರಿಗೆ  ಸೂಚನೆ ನೀಡಿದ ಅಧಿಕಾರಿಗಳು ಈ ಪ್ರದೇಶದಲ್ಲಿ ಅಧಿಕೃತವಾಗಿ ಮರಳುಗಾರಿಕೆ ನಡೆಸಲು ಟೆಂಡರ್‌ ಅಗಿದ್ದು ಅವರಿಗೆ  ಅವಕಾಶ ಮಾಡಿಕೊಡಬೇಕು. ಇನ್ನು ಮುಂದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿದಲ್ಲಿ   ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎನ್ನುವ ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next