Advertisement

ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ : ಸಂಭ್ರಮದ ಮಕರ ಸಂಕ್ರಮಣ ಉತ್ಸವ ಸಂಪನ್ನ

12:00 AM Jan 15, 2023 | Team Udayavani |

ವಂಡ್ಸೆ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ವರ್ಷಾವ ಧಿ ಮಕರ ಸಂಕ್ರಮಣ ಉತ್ಸವವು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡು ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.

Advertisement

ದೇವರ ಸನ್ನಿಧಿಯಲ್ಲಿ ಮಹಾ ಮಂಗಳಾರತಿ ನಡೆಯಿತು. ಬೈಂದೂರು ಕ್ಷೇತ್ರ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಕೃಷ್ಣಮೂರ್ತಿ ಮಂಜ, ಸಿ. ರಘುರಾಮ ಶೆಟ್ಟಿ, ಕೊಲ್ಲೂರು ದೇಗುಲದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ಮಾರಣಕಟ್ಟೆ ದೇಗುಲದ ಮಾಜಿ ಧರ್ಮದರ್ಶಿ ಮಂಜಯ್ಯ ಶೆಟ್ಟಿ, ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿಯ ಸದಸ್ಯ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಸುರೇಂದ್ರ ಶೆಟ್ಟಿ, ಶಂಕರ ಶೆಟ್ಟಿ, ದಿನಕರ ಶೆಟ್ಟಿ, ರಂಜನ್‌ ಶೆಟ್ಟಿ, ಸುಜನ್‌ ಶೆಟ್ಟಿ, ಗೋವರ್ಧನ ಶೆಟ್ಟಿ, ಸರ್ವೋತ್ತಮ ಶೆಟ್ಟಿ, ಅಶೋಕ ಶೆಟ್ಟಿ, ಆದರ್ಶ ಶೆಟ್ಟಿ, ಜಯಪ್ರಕಾಶ ಶೆಟ್ಟಿ, ಯಕ್ಷ ಹಾಗೂ ಚಿಕ್ಕು ಪಾತ್ರಿಗಳು, ಅರ್ಚಕರಾದ ರಾಮಚಂದ್ರ ಮಂಜ, ಶ್ರೀನಿವಾಸ ಮಂಜ, ಸಿಬಂದಿ, ಚಿತ್ತೂರು ಗುಡಿಕೇರಿ ಮನೆಯವರು, ಗ್ರಾಮಸ್ಥರು, ವಿವಿಧ ಸಂಘಟನೆಯ ಪದಾ ಧಿಕಾರಿಗಳು ಉಪಸ್ಥಿತರಿದ್ದರು.

ಕುಂದಾಪುರ, ಬೈಂದೂರು ಹಾಗೂ ಉಡುಪಿ ತಾಲೂಕುಗಳಿಂದ ಆಗಮಿಸಿದ 35 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ದೇವರ ಅನಾಯಾಸ ದರ್ಶನಕ್ಕೆ ಸಕಲ ಸೌಕರ್ಯ ಒದಗಿಸಲಾಗಿತ್ತು.

ಸೇವಂತಿಗೆ ಸೇವೆ
ಬುಟ್ಟಿಯಲ್ಲಿ ಸೇವಂತಿಗೆ, ಸಿಂಗಾರ ಹೂ ಸಹಿತ ಹಣ್ಣುಕಾಯಿಯೊಡನೆ ತಲೆಯ ಮೇಲೆ ಹೊತ್ತು ಶ್ರೀ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಣೆ ಮಾಡುವ ಪದ್ಧತಿ ರೂಢಿಯಲ್ಲಿದ್ದು, ಅದಕ್ಕಾಗಿ ವಿವಿಧ ತಾಲೂಕುಗಳಿಂದ ಆಗಮಿಸಿದ ಭಕ್ತರು ಸರತಿಯಲ್ಲಿ ಸೇರಿದ್ದರು.

ಇದನ್ನೂ ಓದಿ: ಉಡುಪಿ: ಶ್ರೀಕೃಷ್ಣ ಮಠದಲ್ಲಿ ವೈಭವದ ಮಕರಸಂಕ್ರಾಂತಿ ಉತ್ಸವ

Advertisement
Advertisement

Udayavani is now on Telegram. Click here to join our channel and stay updated with the latest news.

Next