ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ.
ರವಿವಾರ ಮುಂಜಾನೆ ಮಡಪ್ ಸುರಂಗದ ಬಳಿ ಕಾರು ಅಪಘಾತಗೊಂಡಿದ್ದು ಕಾರಿನಲ್ಲಿದ್ದ ಮಾಜಿ ಸಚಿವ ಸೇರಿ ಭದ್ರತಾ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ.
ವಿನಾಯಕ್ ಮೇಟೆ ಅವರ ತಲೆ, ಕುತ್ತಿಗೆ, ಕೈಕಾಲುಗಳಿಗೆ ಗಂಭೀರ ಗಾಯಗಳಾದ್ದು ಕೂಡಲೇ ಅವರನ್ನು ಮಹಾತ್ಮ ಗಾಂಧಿ ಮಿಷನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಮರಾಠಾ ಮೀಸಲಾತಿ ಕುರಿತು ಚರ್ಚೆಗಾಗಿ ಇವರು ಮುಂಬೈಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತವಾಗಿದೆ ಎನ್ನಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್ ಅವರು ನವಿ ಮುಂಬೈನ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ವಿನಾಯಕ್ ಮೇಟೆ ಅವರು ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮೇಟೆ ಅವರ ನಿಧನಕ್ಕೆ ರಾಜ್ಯದ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಕುರಿಗಾಯಿಯ ಟೆಂಟ್ ನಲ್ಲಿ ಅರಳಿದ ದೇಶಪ್ರೇಮ: ತೋಟದ ಟೆಂಟ್ ನಲ್ಲಿ ಹಾರಿದ ರಾಷ್ಟ್ರಧ್ವಜ