Advertisement

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಆಂದೋಲನ: ಪೊಲೀಸರು ಸೇರಿ ಹಲವರಿಗೆ ಗಾಯ

12:27 PM Sep 02, 2023 | Team Udayavani |

ಮಹಾರಾಷ್ಟ್ರ: ಮಧ್ಯ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಮರಾಠ ಮೀಸಲಾತಿಗಾಗಿ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕನಿಷ್ಠ 12 ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಅಂಬಾಡ್ ತಹಸಿಲ್‌ನ ಧುಲೆ-ಸೋಲಾಪುರ ರಸ್ತೆಯಲ್ಲಿರುವ ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆದ ಘರ್ಷಣೆಯ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಜೊತೆಗೆ ಪೊಲೀಸರು ಗಾಳಿಯಲ್ಲಿ ಕೆಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ರಾಜಕೀಯವಾಗಿ ಪ್ರಬಲವಾಗಿರುವ ಮರಾಠ ಸಮುದಾಯಕ್ಕೆ ರಾಜ್ಯ ಸರ್ಕಾರ ಒದಗಿಸಿದ್ದ ಮೀಸಲಾತಿಯನ್ನು ಈ ಹಿಂದೆ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

ಮನೋಜ್ ಜಾರಂಗೆ ನೇತೃತ್ವದಲ್ಲಿ ಮಂಗಳವಾರದಿಂದ ಗ್ರಾಮದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಶುಕ್ರವಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಲವು ವ್ಯಕ್ತಿಗಳು ರಾಜ್ಯ ಸಾರಿಗೆ ಬಸ್‌ಗಳು ಮತ್ತು ಖಾಸಗಿ ವಾಹನಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ್ದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು ಎಂದು ಪೊಲೀಸರು ತಿಳಿಸಿದ್ದಾರೆ. ಉಪ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಸಾಂಗ್ಲೆ ಸೇರಿದಂತೆ ಕನಿಷ್ಠ 12 ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದಾರೆ ಮತ್ತು ಅಂತರವಾಲಿ ಸಾರಥಿಯಲ್ಲಿ ಲಾಠಿ ಚಾರ್ಜ್‌ನಲ್ಲಿ 20 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಗಳು ಬುಧವಾರ ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು, ಆದರೆ ಅವರು ಪಟ್ಟು ಬಿಡಲು ನಿರಾಕರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಗುರುವಾರ, ಅಂಬಾಡ್ ತಹಸಿಲ್‌ನ ವಾಡಿಗೋದ್ರಿ ಗ್ರಾಮದಲ್ಲಿ ಅಂಗಡಿಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದವು, ಪ್ರತಿಭಟನೆ ತೀವ್ರ ಸ್ವರೂಪ ಪಡೆಯುವ ನಿಟ್ಟಿನಲ್ಲಿ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ತುಕಡಿ ನಿಯೋಜಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಪ್ರಾದೇಶಿಕ ಸುದ್ದಿವಾಹಿನಿಯೊಂದರ ಜತೆ ಮಾತನಾಡಿದ ಮುಖ್ಯಮಂತ್ರಿ ಶಿಂಧೆ, ಮರಾಠಾ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು ಎಂಬ ಹೇಳಿಕೆಯನ್ನು ನೀಡಿದ್ದರು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ ಮತ್ತು ಹಿಂಸಾಚಾರದ ಬಗ್ಗೆ ಉನ್ನತ ಮಟ್ಟದ ತನಿಖೆಗಾಗಿ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Aditya L1; ಆದಿತ್ಯನ ಅಧ್ಯಯನಕ್ಕೆ ಇಸ್ರೋ ಮಹಾಯಾನ; ಭಾರತದ ಮುಕುಟಕ್ಕೆ ಮತ್ತೊಂದು ಗರಿ

Advertisement

Udayavani is now on Telegram. Click here to join our channel and stay updated with the latest news.

Next