ಬೆಳಗಾವಿ: ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತೆ ಪುಂಡಾಟಿಕೆ ಮುಂದುವರಿಸಿದ್ದು, ಕರ್ನಾಟಕದ ಬಸ್ ಮೇಲೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಮರಾಠಿಯಲ್ಲಿ ಬರೆದ ಪೋಸ್ಟರ್ ಅಂಟಿಸುವ ಮೂಲಕ ಕಿಡಿಗೇಡಿತನ ನಡೆಸಿದೆ.
ದಾವಣಗೆರೆಯಿಂದ ಬೆಳಗಾವಿ ಮಾರ್ಗವಾಗಿ ಪುಣೆಗೆ ತೆರಳಿದ್ದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮೇಲೆ ಮರಾಠಿ ಪೋಸ್ಟರ್ ಅಂಟಿಸಿರುವ ಕಿಡಿಗೇಡಿಗಳು ಕನ್ನಡಿಗರನ್ನು ಕೆರಳಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಸಂಯುಕ್ತ ಮಹಾರಾಷ್ಟ್ರ ಆಗಬೇಕು ಎಂದು ಮರಾಠಿಯಲ್ಲಿ ಪೋಸ್ಟರ್ ಅಂಟಿಸಿದ್ದಾರೆ.
ಇದನ್ನೂ ಓದಿ:ಮಂಗಳೂರಿನಲ್ಲಿ ಗಲಭೆ ಮಾಡಲು ಹುನ್ನಾರ: ಮಾಯಾ ಗ್ಯಾಂಗ್ ಜೊತೆ ಇದೀಗ ‘ಕಾರ್ಖಾನಾ’ ಗ್ಯಾಂಗ್ ಬಂಧನ
ಶರದ್ ಪವಾರ್ ನೇತೃತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ) ಪುಣೆ ಘಟಕದ ಕಾರ್ಯಕರ್ತರು ಹೆಸರಿನಲ್ಲಿ ಈ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಬಗ್ಗೆ ಪದೇ ಪದೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಕಿಡಿಗೇಡಿಗಳು ತಮ್ಮ ಕ್ಯಾತೆ ಮುಂದುವರಿಸಿದ್ದಾರೆ.
ಇದನ್ನೂ ಓದಿ:ಮುಂದೆ ಮತ್ತೆ ಸಂಪುಟ ಪುನಾರಚನೆ ಆಗಬೇಕು, ಇತರರಿಗೂ ಖಾತೆ ನೀಡಬೇಕು: ಆನಂದ್ ಸಿಂಗ್