ಚಾಮರಾಜನಗರ: ಅಖಂಡ ಕರ್ನಾಟಕವನ್ನು ಒಡೆಯುವ ಹೇಳಿಕೆಗಳನ್ನು ನೀಡುತ್ತಿರುವ ಕನ್ನಡ ದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಗೇಟ್ ಮುಂಭಾಗದಲ್ಲಿ ಅರೆಬೆತ್ತಲೆಯಾಗಿ ಉರುಳುಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಭವನದ ಗೇಟ್ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಕರ್ನಾಟಕ ರಾಜ್ಯ ವಿಭಜನೆ ಮಾಡಲು ಮುಂದಾಗಿರುವ ಕನ್ನಡ ವಿರೋಧಿಗಳಿಗೆ ಧಿಕ್ಕಾರ ಕೂಗಿದರು. ಉರುಳುಸೇವೆ ಮಾಡಿದ ಪ್ರತಿಭಟನಾಕಾರರು ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೆಲ ರಾಜಕಾರಣಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜ್ಯ ವಿಭಜನೆ ಮಾತನಾಡುತ್ತಿದ್ದಾರೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಇದಕ್ಕೆ ಬೆಂಬಲ ನೀಡುತ್ತಿದ್ದಾರೆ. ಕರ್ನಾಟಕ ಏಕೀಕರಣದ ಬಗ್ಗೆ ಕನಿಷ್ಠ ತಿಳಿವಳಿಕೆಯೂ ಇಲ್ಲದವರು ಇಂತಹ ಕೆಲಸ ಮಾಡುತ್ತಿರುವುದು ಶೋಚನೀಯ.
ಲಕ್ಷಾಂತರ ಜನರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣವಾಗಿ ಅಖಂಡ ಕರ್ನಾಟಕ ರಚನೆಯಾಗಿ ಇಂದು ರಾಜ್ಯ ಬಹಳ ಸುಭಿಕ್ಷವಾಗಿದೆ. ಇಂತಹ ಸಂದರ್ಭದಲ್ಲಿ ಕುಂಟು ನೆಪ ಹೇಳಿಕೊಂಡು ಕರ್ನಾಟಕ ಭಜನೆಗೆ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯವಾದದ್ದು ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸೇನಾಪಡೆಯ ಗೌರವ ಅಧ್ಯಕ್ಷ ಶಾ. ಮುರಳಿ, ನಿಜಧ್ವನಿ ಗೋಂದರಾಜು, ಪಣ್ಯದಹುಂಡಿ ರಾಜು, ಚಾ.ಹ. ಶಿವರಾಜ್, ಗು.ಪುರುಷೋತ್ತಮ, ತಾಂಡವಮೂರ್ತಿ, ಎಂ.ಶಿವು, àರಭದ್ರ, ಶಿವಶಂಕರ್, ಚಾ.ಸಿ.ಸಿದ್ದರಾಜು, ನಾಗರಾಜ್ ಟೈಲರ್ ಇತರರು ಭಾಗವಸಿದ್ದರು.