Advertisement
ಫೆಬ್ರವರಿ ಅಂತ್ಯದ ಹೊತ್ತಿಗೆ 15-17 ವರ್ಷದ ವಯೋಮಾನದವರ ಲಸಿಕೆ ಪ್ರಕ್ರಿಯೆ ಮುಗಿಯುವ ಸಾಧ್ಯತೆ ಇದೆ. ಈ ಬಳಿಕ 12-14 ವರ್ಷದ ಮಕ್ಕಳಿಗೆ ಲಸಿಕೆ ಪ್ರಕ್ರಿಯೆ ಆರಂಭವಾಗಬಹುದು ಎಂದು ಕೋವಿಡ್ ಕಾರ್ಯಕಾರಿ ಗುಂಪಿನ ಮುಖ್ಯಸ್ಥ ಡಾ| ಎನ್.ಕೆ. ಅರೋರಾ ಹೇಳಿದ್ದಾರೆ. ಈ ವಯೋಮಾನದ 7.5 ಕೋಟಿ ಮಕ್ಕಳು ಇದ್ದಾರೆ ಎಂದು ಅಂದಾಜಿಸಲಾಗಿದೆ.
ಇದೇವೇಳೆ, ಲಸಿಕೆಯನ್ನು ಪಡೆಯಲೇಬೇಕು ಎಂದು ಕಡ್ಡಾಯ ಮಾಡಿಲ್ಲ, ಲಸಿಕೆ ಪ್ರಮಾಣಪತ್ರವನ್ನು ಎಲ್ಲ ಕಡೆ ಹಿಡಿದುಕೊಂಡು ಓಡಾಡಿ ಎಂದೂ ಯಾರಿಗೂ ಹೇಳಿಲ್ಲ ಎಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್ ಅಫಿದಾವಿತ್ ಸಲ್ಲಿಸಿದೆ. ದಿವ್ಯಾಂಗರಿಗೆ ಸುಲಭವಾಗಿ ಲಸಿಕೆ ಸಿಗುವ ಬಗ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ಗೆ ಈ ಅರಿಕೆ ಮಾಡಿದೆ. ನಾವು ಹೊರಡಿಸಿರುವ ಮಾರ್ಗಸೂಚಿಗಳು ಕೂಡ ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿಲ್ಲ ಎಂದು ತಿಳಿಸಿದೆ.
Related Articles
Advertisement