Advertisement
ರಾಜ್ಯದ 5,202 ಸರ್ಕಾರಿ ಪ್ರೌಢಶಾಲೆ, 3,244 ಅನುದಾನಿತ, 6004 ಅನುದಾನ ರಹಿತ ಸೇರಿ 14,450 ಪ್ರೌಢಶಾಲೆಗಳ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸರ್ಕಾರಿ 1140 ಮತ್ತು ಅನುದಾನಿತ 1124,ಖಾಸಗಿ 583 ಕೇಂದ್ರಗಳು ಹಾಗೂ 46 ಸೂಕ್ಷ್ಮ, 7 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರ ಸಹಿತವಾಗಿ 2,847 ಕೇಂದ್ರಗಳಿಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪರೀಕ್ಷೆಗೆ ಬೇಕಾದ ಎಲ್ಲ ರೀತಿಯ ಭದ್ರತಾ ಕ್ರಮವನ್ನು ಜಿಲ್ಲಾಡಳಿತ ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಸಿ.ಜಾಫರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
Related Articles
ವಿದ್ಯಾರ್ಥಿಗಳು ಅನರ್ಹ?
ವರ್ಷಪೂರ್ತಿ ಸರಿಯಾಗಿ ತರಗತಿಗಳಿಗೆ ಹೋಗದೇ ಹಾಜರಾತಿ ಕೊರತೆ ಎದುರಿಸುತ್ತಿರುವ 10 ಸಾವಿರ ವಿದ್ಯಾರ್ಥಿಗಳು ಮಾ.21ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅನರ್ಹರಾಗಿದ್ದಾರೆ. ವರ್ಷದ ಒಟ್ಟು ಹಾಜರಾತಿಯಲ್ಲಿ ಕನಿಷ್ಠ ಶೇ.75ರಷ್ಟು ಹಾಜರಾತಿ ಹೊಂದಿರಬೇಕು. ನಿರ್ದಿಷ್ಟ ಪ್ರಮಾಣಕ್ಕಿಂತ ಕಡಿಮೆ ಹಾಜರಾತಿ ಇರುವ 10,572 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
Advertisement
ವಿಶಿಷ್ಟಚೇತನರು ಹಾಜರಿ4651 ವಿಶಿಷ್ಟಚೇತನ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,451 ವಿದ್ಯಾರ್ಥಿಗಳಿಗೆ ಭಾಷಾ ವಿನಾಯಿತಿ ನೀಡಲಾಗಿದೆ. 480 ಅರ್ಹರಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಬದಲಾಗಿ ಪರ್ಯಾಯ ವಿಷಯಗಳನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ. ಮಾನ್ಯತೆ ನವೀಕರಿಸದ ಖಾಸಗಿ ಶಾಲೆಗಳ 20 ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ವರ್ಗಾವಣೆ
ಮಾಡಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಳಾ ತಿಳಿಸಿದರು.