Advertisement

ಮಾ. 23 – 30: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಸಚಿವ ಆರ್‌.ಅಶೋಕ್‌

11:54 PM Feb 08, 2023 | Team Udayavani |

ಬೆಂಗಳೂರು: ಹದಿನಾಲ್ಕನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾ.23ರಿಂದ 30ರ ವರೆಗೆ ನಡೆಯಲಿದೆ. ರಾಜಾಜಿನಗರದ ಒರಿಯನ್‌ ಮಾಲ್‌ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ನಡೆಯಲಿದೆ.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರೊತ್ಸವ ಸಂಘಟನ ಸಮಿತಿ ಅಧ್ಯಕ್ಷರೂ ಆದ ಕಂದಾಯ ಸಚಿವ ಆರ್‌.ಅಶೋಕ್‌, ಮಾ. 23ರಂದು ಸಂಜೆ 6 ಗಂಟೆಗೆ ಕಾರ್ಯಕ್ರಮವನ್ನು ವಿಧಾನಸೌಧದ ವೈಭವದ ಮೆಟ್ಟಿಲುಗಳ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.

ದೇಶ – ವಿದೇಶದ ಸುಮಾರು 300 ಸಿನೆಮಾಗಳು ಪ್ರದರ್ಶನವಾಗಲಿವೆ ಎಂದರು.

ಪ್ರಶಸ್ತಿ ಮೊತ್ತವನ್ನು ಹೆಚ್ಚಿಸಲು ಸಮಿತಿಗೆ ಸಲಹೆ ನೀಡಿದ್ದೇನೆ. ವಿವಾದಕ್ಕೆ ಅವಕಾಶವಿಲ್ಲದಂತೆ ಅರ್ಹರು, ಸಮರ್ಥರನ್ನು ಒಳಗೊಂಡ ಆಯ್ಕೆ ಸಮಿತಿಯನ್ನು ರಚಿಸಲಾಗುತ್ತದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next