Advertisement

ಮಾರ್ಚ್‌ 2ನೇ ವಾರದಲ್ಲಿ 7ನೇ ಮೌಲ್ಯಾಂಕನ ಪರೀಕ್ಷೆ

01:58 AM Jan 30, 2020 | mahesh |

ಬೆಂಗಳೂರು: ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 2ನೇ ವಾರದಲ್ಲಿ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Advertisement

ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್‌ ವ್ಯವಸ್ಥೆ (ಎಸ್‌ಎಟಿಎಸ್‌)ಯಲ್ಲಿ ನಮೂದಿಸಲಾಗಿರುವ ವಿದ್ಯಾರ್ಥಿಗಳ ಮಾಹಿತಿಗೆ ಅನುಗುಣವಾಗಿ ಮೌಲ್ಯಾಂಕನ ಪರೀಕ್ಷೆ ನಡೆಯಲಿದೆ. ಮೌಲ್ಯಾಂಕನ ಪರೀಕ್ಷೆ ಸಂಬಂಧ ಶಾಲೆಯ ಮಾಧ್ಯಮ, ಭಾಷಾ ಸಂಯೋಜನೆ, ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಮತ್ತು ಎಸ್‌ಎಟಿಎಸ್‌ನಲ್ಲಿ ನೀಡಲಾಗಿರುವ ಇನ್ನಿತರ ವಿವರಗಳನ್ನು ಫೆ. 5ರೊಳಗೆ ಕಡ್ಡಾಯವಾಗಿ ಅಪ್‌ಡೇಟ್‌ ಮಾಡುವಂತೆ ಆಯಾ ಶಾಲಾ ಮುಖ್ಯ ಶಿಕ್ಷಕರು ಮತ್ತು ಎಲ್ಲ ಹಂತದ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ.

ಫೆ.5ರ ಅನಂತರ ಎಸ್‌ಎಟಿಎಸ್‌ನಲ್ಲಿ ಅಪ್‌ಡೇಟ್‌ ಮಾಡಲಾದ ಯಾವುದೇ ಮಾಹಿತಿಯನ್ನೂ ಪರಿಗಣಿಸಲಾಗುವುದಿಲ್ಲ. ಎಸ್‌ಎಟಿಎಸ್‌ನಲ್ಲಿರುವ ಮಾಹಿತಿ ಆಧರಿಸಿಯೇ ಪ್ರಶ್ನೋತ್ತರ ಪತ್ರಿಕೆಗಳನ್ನು ಮುದ್ರಿಸಿ ಶಾಲೆಗಳಿಗೆ ಸರಬರಾಜು ಮಾಡಲಾಗುವುದು. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರಿಗೆ ಸೂಕ್ತ ಮಾಹಿತಿ ಒದಗಿಸಿ ಫೆ.5ರೊಳಗೆ ಶಾಲೆಯ ಎಲ್ಲ ಮಾಹಿತಿಯನ್ನೂ ಅಪ್‌ಡೇಟ್‌ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next