ಉಪ್ಪಿನಂಗಡಿ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಮಾ. 5ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಉದ್ಘಾಟಿಸಲಿದ್ದಾರೆ ಎಂದು ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್ ತಿಳಿಸಿದರು.
Advertisement
ಗ್ರಾ.ಪಂ. ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸಭಾಂಗಣ ಉದ್ಘಾಟಿಸಲಿದ್ದು, ಶಾಸಕಿ ಹಾಗೂ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿ ಗ್ರಾಮ ಕರಣಿಕರ ಕಚೇರಿಯನ್ನು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಗೋದಾಮು ಕಟ್ಟಡ ಉದ್ಘಾಟಿಸಲಿದ್ದಾರೆ. ಗ್ರಾ.ಪಂ. ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಆಹಾರ ಮತ್ತು ನಾಗರಿಕ ಸೇವಾ ಸಚಿವ ಯು.ಟಿ. ಖಾದರ್, ದ.ಕ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬೆಳ್ತಂಗಡಿ ಶಾಸಕ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ವಸಂತ ಬಂಗೇರ, ಸುಳ್ಯ ಶಾಸಕ ಅಂಗಾರ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್ ಚಂದ್ರ ಶೆಟ್ಟಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಐವನ್ ಡಿ’ಸೋಜಾ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಜಿ.ಪಂ. ಸದಸ್ಯೆ ಶಯನಾ ಜಯಾನಂದ, ತಾ.ಪಂ. ಸದಸ್ಯೆ ಸುಜಾತಾ ಕೃಷ್ಣ ಮುಖ್ಯ ಅತಿಥಿಗಳಾಗಿರುತ್ತಾರೆ ಎಂದರು.
ನೂತನ ಕಟ್ಟಡದಲ್ಲಿ 500ರಿಂದ 600 ಮಂದಿ ಕುಳಿತುಕೊಳ್ಳುವ ವಿಶಾಲವಾದ ಮತ್ತು ಸುಸಜ್ಜಿತ ವ್ಯವಸ್ಥೆಯನ್ನು ಒಳಗೊಂಡ ಸಭಾಭವನ ಇರುತ್ತದೆ. ಇದೇ ಕಟ್ಟಡದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಕರಣಿಕರ ಕಚೇರಿ, ಜಿ.ಪಂ. ಎಂಜಿನಿಯರ್ ಕಚೇರಿ, ವಿದ್ಯುತ್ ಬಿಲ್ ಸ್ವೀಕಾರ ಕೇಂದ್ರ ಹಾಗೂ ಅಂಗವಿಕಲರ ಗುರುತು ಚೀಟಿ ಕೇಂದ್ರ, ಜೆರಾಕ್ಸ್, ಅರ್ಜಿ ನಮೂನೆ ಕೇಂದ್ರ ಇರುತ್ತದೆ ಎಂದರು. ಗ್ರಾ.ಪಂ. ಸದಸ್ಯರಾದ ಗೋಪಾಲ ಹೆಗ್ಡೆ, ಯು. ಕೆ. ಇಬ್ರಾಹಿಂ, ರಮೇಶ್ ಭಂಡಾರಿ, ಪಿಡಿಒ ಅಬ್ದುಲ್ಲಾ ಅಸಾಫ್, ಕಾರ್ಯದರ್ಶಿ ಶಾರದಾ ಉಪಸ್ಥಿತರಿದ್ದರು.
Related Articles
ಬೇಸಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಯಾರೂ ನೀರು ಪೋಲು ಮಾಡುವಂತಿಲ್ಲ. ಕೆಲವರು ಹೂಗಿಡ, ಇತರೇ ಗಿಡಗಳಿಗೆ ಕುಡಿಯುವ ನೀರು ಬಳಸುತ್ತಿದ್ದಾರೆ, ಇನ್ನೂ ಕೆಲವರು ಕಟ್ಟಡ ನಿರ್ಮಾಣಕ್ಕೂ ಬಳಸುತ್ತಿದ್ದಾರೆ. ಇಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು, ನೀರಿನ ಸಂಪರ್ಕ ಕಡಿತಗೊಳಿಸುವುದಾಗಿ ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್ ಎಚ್ಚರಿಸಿದ್ದಾರೆ.
Advertisement
14 ಲಕ್ಷ ರೂ. ವೆಚ್ಚದ ಗೋದಾಮು ಕಟ್ಟಡಉದ್ಯೋಗ ಖಾತರಿ ಯೋಜನೆಗೆ ಅಡಿಯಲ್ಲಿ 14 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು ನಿರ್ಮಾಣ್ ಆರ್ಕಿಟೆಕ್ಸ್ ಸಂಸ್ಥೆಯ ಸಚ್ಚಿದಾನಂದ ಅವರ ವಿಶೇಷ ವಿನ್ಯಾಸದೊಂದಿಗೆ ಆಕರ್ಷಕವಾಗಿ ಗೋದಾಮು ಕಟ್ಟಡ ನಿರ್ಮಿಸಲಾಗಿದೆ. ಗ್ರಾ.ಪಂ.ನ ಎಲ್ಲ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಸುಂದರ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದರು.