Advertisement

ಡಾ|ವೀರೇಂದ್ರ ಹೆಗ್ಗಡೆಯವರಿಗೆ ಅಧಿಕೃತ ಆಹ್ವಾನ

01:50 AM Mar 02, 2020 | Team Udayavani |

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಮಾ.7, 8ರಂದು ಮಂಗಳೂರು ಪುರಭವನದಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 3 ಸಾವಿರ ಮಂದಿ ಪತ್ರಕರ್ತರು ಸೇರುವ ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಮಂತ್ರಿಸಲಾಯಿತು.

Advertisement

ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಮಂಗಳೂರು ಪ್ರಸ್‌ಕ್ಲಬ್‌ ಅಧ್ಯಕ್ಷ ಅನ್ನು ಮಂಗಳೂರು ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರಿಗೆ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಡಾ| ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ನಡೆಯುವ ಸಮ್ಮೇಳನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.

ಸಮ್ಮೇಳನದ ಆಶಯ ನುಡಿಗಳನ್ನು ತರಂಗ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಅವರು ಆಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಗಣ್ಯರು ಭಾಗಿಯಾಗಲಿದ್ದಾರೆ ಎಂದರು.

ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹರೇಕಳ ಹಾಜಬ್ಬಅವರಿಗೆ ಸಮ್ಮಾನ ನಡೆಯಲಿದೆ. ಜತೆಗೆ ಪತ್ರಿಕೋದ್ಯಮಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕರಾವಳಿಯ ಹಿರಿಯ ಪತ್ರಕರ್ತರನ್ನು ಸಮ್ಮಾನಿಸಲಾಗುವುದು ಎಂದರು.

Advertisement

ಮಾ. 8ರಂದು ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂಗಳಾದ ಗೋವಿಂದ ಕಾರಜೋಳ, ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಗಣ್ಯರು ಭಾಗಿಯಾಗಲಿದ್ದಾರೆ.

ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಆನಂದ ಶೆಟ್ಟಿ, ಭಾಸ್ಕರ ರೈ ಕಟ್ಟ, ಜಗನ್ನಾಥ ಶೆಟ್ಟಿ ಬಾಳ, ಹಾಸನ ಪತ್ರಕರ್ತರ ಸಂಘದ ಮಾಜಿ ಜಿಲ್ಲಾಧ್ಯಕ್ಷ ರವಿ ನಾಕಲ್ಗೊàಡು, ಬೆಳ್ತಂಗಡಿ ತಾ| ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್‌ ಆಲಿಕುಂಞಿ, ತಾ| ಪತ್ರಕರ್ತರ ಸಂಘದಿಂದ ಕಾರ್ಯದರ್ಶಿ ಮನೋಹರ ಬಳಂಜ, ಶ್ರೀನಿವಾಸ ತಂತ್ರಿ, ಆರ್‌.ಎನ್‌.ಪೂವಣಿ, ಧನಕೀರ್ತಿ ಆರಿಗ ಉಪಸ್ಥಿತರಿದ್ದರು.
ಡಿ. ಹರ್ಷೆàಂದ್ರ ಕುಮಾರ್‌ ಅವರಿಗೆ ಮತ್ತು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರನ್ನೂ ಭೇಟಿ ಮಾಡಿ ಆಮಂತ್ರಿಸಲಾಯಿತು.

ಸಮ್ಮಾನ-ಪುರಸ್ಕಾರ
ವಿದ್ಯುನ್ಮಾನ ಮಾಧ್ಯಮ, ಆಕಾಶವಾಣಿ, ಮುದ್ರಣ ಮಾಧ್ಯಮ ಮತ್ತು ಸಮೂಹ ಮಾಧ್ಯಮಗಳಲ್ಲಿ ವೃತ್ತಿನಿರತರಾದ ಅನೇಕ ಮಹನೀಯರಿಗೆ ಸಮ್ಮಾನ -ಪುರಸ್ಕಾರ ನಡೆಯಲಿದೆ. ವಾರ್ಷಿಕ ಪ್ರಶಸ್ತಿಗಳ ವಿತರಣೆ ಕೂಡ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next