Advertisement

ಗಾಂಜಾ ಮಾರಾಟಗಾರನ ಬಂಧನ: 3 ಕೆ.ಜಿ. ಮಾಲು ವಶ

11:40 AM Aug 01, 2018 | Team Udayavani |

ಬೆಂಗಳೂರು: ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ಟಿ ಎನ್‌. ಬಿನ್ನಿ (21) ಬಂಧಿತ. ಮತ್ತೂಬ್ಬ ಆರೋಪಿ ನೊಬೆಲ್‌ ನೊಬರ್ಟ್‌ (21) ತಲೆಮರೆಸಿಕೊಂಡಿದ್ದಾನೆ. ಬಂಧಿತನಿಂದ 3 ಕೆ.ಜಿ 110 ಗ್ರಾಂ ಗಾಂಜಾ ಮತ್ತು ಒಂದು ಮೊಬೈಲ್‌ ಹಾಗೂ 2 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಆರೋಪಿಗಳಿಬ್ಬರು ಕೆಲ ವರ್ಷಗಳ ಹಿಂದೆ ಕೇರಳದಿಂದ ನಗರಕ್ಕೆ ಬಂದಿದ್ದು, ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ಸದ್ಯ ಅರ್ಧಕ್ಕೆ ವಿದ್ಯಾಭ್ಯಾಸ ಮೊಟಕುಗೊಳಿಸಿರುವ ಆರೋಪಿಗಳು ಜೀವನ ನಿರ್ವಹಣೆಗಾಗಿ ಆಂಧ್ರಪ್ರದೇಶದಿಂದ ಗಾಂಜಾ ತರಿಸಿ, ಸಣ್ಣ-ಸಣ್ಣ ಪ್ಯಾಕೆಟ್‌ಗಳನ್ನಾಗಿ ಮಾಡಿ ಖಾಸಗಿ ಕಾಲೇಜುಗಳ ಬಳಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು.

ಇತ್ತೀಚೆಗೆ ಕೊತ್ತನೂರಿನ ಕೆ.ನಾರಾಯಣಪುರ ಬಳಿಯ ಕ್ರಿಸ್ತುಜಯಂತಿ ಕಾಲೇಜು ಬಳಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಮಾಹಿತಿಯನ್ನಾ ಧರಿಸಿ ದಾಳಿ ನಡೆಸಿದಾಗ ಕ್ರಿಸ್ಟಿಯನ್ನು ಬಂಧಿಸಲಾಗಿದೆ. ಇದೇ ವೇಳೆ ಮತ್ತೂಬ್ಬ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next