Advertisement

1.5 ಲಕ್ಷರೂ. ಮೌಲ್ಯದ ಗಾಂಜಾ ವಶ; ಓರ್ವ ಸೆರೆ

11:47 AM Jul 19, 2022 | Team Udayavani |

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಜೀವಣಗಿ ಗ್ರಾಮದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಪೊಲೀಸರು ಬಂಧಿಸಿ 1.5ಲಕ್ಷ ರೂ. ಮೌಲ್ಯದ 10 ಕೆಜಿ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

Advertisement

ಬಂಧಿತನನ್ನು ಚಿಂಚೋಳಿ ತಾಲೂಕಿನ ಮಾಡಬೂಳ ಗ್ರಾಮದ ಓಂಕಾರ ತಾರು ಎಂದು ಗುರುತಿಸಲಾಗಿದೆ. ಇದೇ ವೇಳೆಯಲ್ಲಿ ಇನ್ನೋರ್ವ ಸಂಜು ಅಲಿಯಾಸ್‌ ಕಾಳು ಪರಾರಿಯಾಗಿದ್ದಾನೆ. ಆತನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಅಬಕಾರಿ ಅಧೀಕ್ಷಕ ಇಸ್ಮಾಯಿಲ್‌ ಇನಾಮದಾರ, ಉಪ ಅಧೀಕ್ಷಕ ದೋಡಪ್ಪ ಹೆಬಳೆ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕ ಗೋಪಾಳೆ ಪಂಡಿತ, ಉಪ ನಿರೀಕ್ಷಕ ಅಶೋಕಕುಮಾರ ಹಾಗೂ ಸಿಬ್ಬಂದಿ ಈ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next