Advertisement

ಹನೂರು : ಅಂಗಡಿಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ

04:54 PM Oct 13, 2020 | sudhir |

ಹನೂರು : ಪೆಟ್ಟಿಗೆ ಅಂಗಡಿ ಯೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ತಾಲೂಕಿನ ವಿ.ಎಸ್ ದೊಡ್ಡಿ ಗ್ರಾಮದ ಶಿವಪ್ಪ(46) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಪೆಟ್ಟಿಗೆ ಅಂಗಡಿಯನ್ನು ಇಟ್ಟುಕೊಂಡಿದ್ದು ಗಾಂಜಾವನ್ನು ಮಾರಾಟ ಮಾಡುತ್ತಿದ್ದನು ಎನ್ನಲಾಗಿದೆ.

ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹನೂರು ಪೋಲಿಸರು ಮಂಗಳವಾರ ಬೆಳಗ್ಗೆ 11 ಗಂಟೆ ವೇಳೆಯಲ್ಲಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 300ಗ್ರಾಂ ಒಣಗಿದ ಗಾಂಜಾ ಪತ್ತೆಯಾಗಿದ್ದು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು.

ದಾಳಿಯಲ್ಲಿ ಸಿಪಿಐ ರವಿನಾಯಕ್, ಸಿಬ್ಬಂದಿಗಳಾದ ಪ್ರದೀಪ್, ರಾಮದಾಸ್, ಬಿಳಗೌಡ, ಶಿವು ಹಾಗೂ ಲೊಕ್ಕನಹಳ್ಳಿ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಎಂ ಪ್ರಸಾದ್ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next