ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ಪರಿಣಾಮ ಗುರುವಾರ (ಫೆ.17) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ : ಮಕ್ಕಳು, ಮಹಿಳೆಯರು ಸೇರಿ ಹಲವರಿಗೆ ಗಾಯ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 104.67 ಅಂಕಗಳಷ್ಟು ಇಳಿಕೆಯಾಗಿದ್ದು, 57,892.01 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 17.60 ಅಂಕಗಳಷ್ಟು ಕುಸಿತ ಕಂಡಿದ್ದು, 17,304.60 ಅಂಕಗಳ ಮಟ್ಟದಲ್ಲಿದೆ.
ಐಸಿಐಸಿಐ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್ ಆಲ್ಟ್ರಾಟೆಕ್ ಸಿಮೆಂಟ್, ಇಂಡಸ್ ಇಂಡ್ ಬ್ಯಾಂಕ್ ಮತ್ತು ಯುಪಿಎಲ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ಒಎನ್ ಜಿಸಿ, ಎಚ್ ಡಿಎಫ್ ಸಿ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್ ಡಿಎಫ್ ಸಿ ಲೈಫ್ ಷೇರುಗಳು ಲಾಭಗಳಿಸಿದೆ.
ಬುಧವಾರ (ಫೆ.16) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 145.37 ಅಂಕ ಇಳಿಕೆಯಾಗಿದ್ದು, 57,996.68 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 30.30 ಅಂಕಗಳಷ್ಟು ಕುಸಿತದೊಂದಿಗೆ 17,322.20 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿತ್ತು.