ಮುಂಬಯಿ : ಇಂದು ಬುಧವಾರದ ಬೆಳಗ್ಗಿನ ವಹಿವಾಟಿನಲ್ಲಿ 400ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ದಾಖಲಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ, ಭಾರತ-ಪಾಕ್ ಬಿಕ್ಕಟ್ಟು ತೀವ್ರಗೊಳ್ಳತೊಡಗಿದಂತೆಯೇ ಸೋಲಿನ ಹಾದಿಯಲ್ಲಿ ಸಾಗಿ ದಿನದ ವಹಿವಾಟನ್ನು ಅಂತಿಮವಾಗಿ 68.28 ಅಂಕಗಳ ನಷ್ಟದೊಂದಿಗೆ 35,905.43 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ನಿನ್ನೆ ಮಂಗಳವಾರ ಸೆನ್ಸೆಕ್ಸ್ 239.67 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಕೂಡ 28.65 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,806.65 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಡಾಲರ್ ಎದುರು ರೂಪಾಯಿ ಇಂದು 25 ಪೈಸೆಗಳ ನಷ್ಟಕ್ಕೆ ಗುರಿಯಾಗಿ 71.32 ರೂ. ಮಟ್ಟಕ್ಕೆ ಜಾರಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,704 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,161 ಶೇರುಗಳು ಮುನ್ನಡೆ ಸಾಧಿಸಿದವು; 1,372 ಶೇರುಗಳು ಹಿನ್ನಡೆಗೆ ಗುರಿಯಾದವು; 171 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.