ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿನ ಸ್ಥಿರತೆಯ ಪ್ರವೃತ್ತಿಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 69.89 ಅಂಕಗಳ ಏರಿಕೆಯನ್ನು ದಾಖಲಿಸಿ 31,311.45 ಅಂಕಗಳ ಮಟ್ಟಕ್ಕೆ ತಲುಪಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 16 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 9,653.60 ಅಂಕಗಳ ಮಟ್ಟದಲ್ಲಿ ಆರಂಭಿಸಿತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ರಿಯಲ್ಟಿ, ಹೆಲ್ತ್ ಕೇರ್, ಆಟೋ ಮತ್ತು ಕ್ಯಾಪಿಟಲ್ ಗೂಡ್ಸ್ ವಲಯದ ಶೇರುಗಳು ಉತ್ತಮ ಖರೀದಿಯನ್ನು ಕಂಡವು.
ರಿಲಯನ್ಸ್ ಇಂಡಸ್ಟ್ರೀಸ್, ಲೂಪಿನ್, ಏಶ್ಯನ್ ಪೇಂಟ್ಸ್, ಟಾಟಾ ಮೋಟರ್ ಮತ್ತು ಹೀರೋ ಮೋಟೋ ಕಾರ್ಪ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಏಶ್ಯನ್ ಶೇರು ಮಾರುಕಟ್ಟೆಗಳ ಪೈಕಿ ಹಾಂಕಾಂಗ್‌ನ ಹ್ಯಾಂಗ್ ಸೆಂಗ್ ಶೇ.0.21, ಶಾಂಘೈ ಕಾಂಪೋಸಿಟ್ ಶೇ.0.04ರ ಮುನ್ನಡೆಯನ್ನು ಕಂಡವು.