ನವದೆಹಲಿ:ಜಾಗತಿಕ ಮಾರುಕಟ್ಟೆಯಲ್ಲಿನ ದುರ್ಬಲ ವಹಿವಾಟಿನ ಪರಿಣಾಮ ಸತತ ಐದನೇ ದಿನವಾದ ಗುರುವಾರವೂ (ಜನವರಿ 28, 2021) ಮುಂಬೈ ಷೇರುಮಾರುಕಟ್ಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 536 ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿದೆ.
ಇದನ್ನೂ ಓದಿ:ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್
ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ(ಬಿಎಸ್ ಇ) 535.37 ಅಂಕಗಳಷ್ಟು ಕುಸಿತ ಕಂಡು ದಿನಾಂತ್ಯಕ್ಕೆ 46.874.36ಕ್ಕೆ ವಹಿವಾಟು ಅಂತ್ಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 149 ಅಂಕಗಳಷ್ಟು ಕುಸಿತ ಕಂಡು 13,817.55 ಅಂಕಗಳ ಗಡಿಗೆ ಇಳಿಕೆ ಕಂಡಿದೆ.
ಷೇರು ಪತನದಿಂದ ಎಚ್ ಯುಎಲ್ ಶೇರು ಭಾರೀ ನಷ್ಟ ಅನುಭವಿಸಿದ್ದು, ಇನ್ನುಳಿದಂತೆ ಮಾರುತಿ, ಎಚ್ ಡಿಎಫ್ ಸಿ ಬ್ಯಾಂಕ್, ಪವರ್ ಗ್ರಿಡ್, ಇಂಡಸ್ ಲ್ಯಾಂಡ್ ಬ್ಯಾಂಕ್, ಎಚ್ ಸಿಎಲ್ ಟೆಕ್ ಮತ್ತು ಬಜಾಜ್ ಫಿನ್ ಸರ್ವ್ ಷೇರು ನಷ್ಟ ಕಂಡಿದೆ.
ಆ್ಯಕ್ಸಿಸ್ ಬ್ಯಾಂಕ್, ಎಸ್ ಬಿಐ, ಒಎನ್ ಜಿಸಿ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳು ಲಾಭಗಳಿಸಿವೆ. ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ಷೇರುಪೇಟೆಯಲ್ಲಿ ಏಕಾಏಕಿ ವಿದೇಶಿ ಸಾಂಸ್ಥಿಕ ಹೂಡಿಕೆಯ ಹೊರಹರಿವಿನ ಹಿನ್ನೆಲೆಯಲ್ಲಿ ಹೂಡಿಕೆದಾರರು ಎಚ್ಚರಿಕೆಯ ನಡೆಯೊಂದಿಗೆ ಷೇರುಗಳ ಮಾರಾಟದಲ್ಲಿ ತೊಡಗಿದ ಪರಿಣಾಮ ಕುಸಿತ ಕಂಡಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ಸ್ಟ್ರೆಟಜಿ ಮುಖ್ಯಸ್ಥ ಬಿನೋದ್ ಮೋದಿ ತಿಳಿಸಿದ್ದಾರೆ.