ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ದುರ್ಬಲ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 338 ಅಂಕ ಇಳಿಕೆಯಾಗುವ ಮೂಲಕ ಗುರುವಾರ(ಮೇ 20)ದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಲಂಕಾ ವಿರುದ್ಧ 3 ಏಕದಿನ, 3 ಟಿ20: ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಬಹುತೇಕ ಖಚಿತ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 337.78 ಅಂಕ ಕುಸಿತವಾಗುವ ಮೂಲಕ 49,564.86 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 124.10 ಅಂಕ ಇಳಿಕೆಯಾಗಿ 14,906.05ರ ಗಡಿಗೆ ಕುಸಿದಿದೆ.
ಸೆನ್ಸೆಕ್ಸ್ ಕುಸಿತದಿಂದ ಒಎನ್ ಜಿಸಿ, ಸನ್ ಫಾರ್ಮಾ, ಪವರ್ ಗ್ರಿಡ್, ಆ್ಯಕ್ಸಿಸ್ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್, ಭಾರ್ತಿ ಏರ್ ಟೆಲ್ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ.
ಮತ್ತೊಂದೆಡೆ ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಇಂಡಸ್ ಇಂಡ್ ಬ್ಯಾಂಕ್, ಟೈಟಾನ್, ಎಲ್ ಆ್ಯಂಡ್ ಟಿ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ಲಾಭ ಗಳಿಸಿದೆ.