ಮುಂಬಯಿ:ಜಾಗತಿಕ ಷೇರು ಮಾರುಕಟ್ಟೆಯ ಮಂದಗತಿಯ ವಹಿವಾಟಿನ ಪರಿಣಾಮ ಅಲ್ಪ ಪ್ರಮಾಣದಿಂದ ಭರ್ಜರಿ ಏರಿಕೆ ಕಾಣುತ್ತಿದ್ದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಮಂಗಳವಾರ (ಮಾರ್ಚ್ 15) 700ಕ್ಕೂ ಅಧಿಕ ಅಂಕಗಳ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗುವುದಿಲ್ಲ; ಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ವಿದ್ಯಾರ್ಥಿನಿಯರು
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕ ಏರಿಕೆ ಕಂಡಿತ್ತು. ಆದರೆ ದಿನಾಂತ್ಯದಲ್ಲಿ ಸಂವೇದಿ ಸೂಚ್ಯಂಕ 709.17 ಅಂಕಗಳಷ್ಟು ಇಳಿಕೆಯೊಂದಿಗೆ 55,776.85 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.
ಅದೇ ರೀತಿ ಎನ್ ಎಸ್ ಇ ನಿಫ್ಟಿ 208.30 ಅಂಕ ಇಳಿಕೆಯಾಗಿದ್ದು, 16,663 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಟಾಟಾ ಸ್ಟೀಲ್, ಟೆಕ್ ಮಹೀಂದ್ರ, ಕೋಟಕ್ ಮಹೀಂದ್ರ ಬ್ಯಾಂಕ್, ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರಿಸ್ ಲಿಮಿಟೆಡ್, ಆ್ಯಕ್ಸಿಸ್ ಬ್ಯಾಂಕ್ ಮತ್ತು ಎಚ್ ಸಿಎಲ್ ಟೆಕ್ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಮಹೀಂದ್ರ ಆ್ಯಂಡ್ ಮಹೀಂದ್ರ, ಮಾರುತಿ ಸುಜುಕಿ, ನೆಸ್ಲೆ ಇಂಡಿಯಾ, ಏಷಿಯನ್ ಪೇಂಟ್ಸ್ ಮತ್ತು ಟೈಟಾನ್ ಷೇರುಗಳು ಲಾಭಗಳಿಸಿದೆ. ಚೀನಾದ ಕೆಲವು ಪ್ರದೇಶಗಳಲ್ಲಿನ ಲಾಕ್ ಡೌನ್ ಪರಿಣಾಮ ಹಾಂಗ್ ಕಾಂಗ್ ಮತ್ತು ಶಾಂಘೈ ಷೇರುಪೇಟೆ ಸೆನ್ಸೆಕ್ಸ್ ಕುಸಿತ ಕಂಡಿದೆ.