ಮುಂಬಯಿ: ರಷ್ಯಾ ಮತ್ತು ಉಕ್ರೇನ್ ನಡುವಿನ ನೂತನ ರಾಜತಾಂತ್ರಿಕ ಮಾತುಕತೆ ನಡೆಸಲಿದ್ದು, ತೈಲ ಬೆಲೆ ಇಳಿಕೆಯಾಗಲಿದೆ ಎಂಬ ಭರವಸೆ ಹಿನ್ನೆಲೆಯಲ್ಲಿ ಸೋಮವಾರ (ಮಾರ್ಚ್ 14) ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 900ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಮಾರ್ಚ್ 16ರಿಂದ 12-14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 935.72 ಅಂಕಗಳಷ್ಟು ಏರಿಕೆಯಾಗಿದ್ದು, 56,486.02 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 240.85 ಅಂಕ ಏರಿಕೆಯೊಂದಿಗೆ 16,871.30 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಇನ್ಫೋಸಿಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್ ಡಿಎಫ್ ಸಿ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಮಾರುತಿ ಸುಜುಕಿ ಇಂಡಿಯಾ, ಎಚ್ ಡಿಎಫ್ ಸಿ ಮತ್ತು ವಿಪ್ರೋ ಷೇರುಗಳು ಶೇ.3.76ರಷ್ಟು ಲಾಭಗಳಿಸಿದೆ.
ಮತ್ತೊಂದೆಡೆ ಹಿಂದೂಸ್ತಾನ್ ಯುನಿಲೀವರ್, ಸನ್ ಫಾರ್ಮಾಸ್ಯೂಟಿಕಲ್ ಇಂಡಸ್ಟ್ರೀಸ್, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಮತ್ತು ಟಾಟಾ ಸ್ಟೀಲ್ ಷೇರುಗಳು ನಷ್ಟ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಹಾಂಗ್ ಕಾಂಗ್, ಶಾಂಘೈ ಷೇರುಪೇಟೆ ಸೆನ್ಸೆಕ್ಸ್ ಇಳಿಕೆ ಕಂಡಿದೆ.