ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ನೀರಸ ವಹಿವಾಟಿನ ಪರಿಣಾಮ ಗುರುವಾರ (ಮೇ 12) ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 953.92 ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ. ಭಾರೀ ಪ್ರಮಾಣದ ಕುಸಿತದಿಂದ 5 ಲಕ್ಷ ಕೋಟಿ ರೂಪಾಯಿ ಹೂಡಿಕೆದಾರರ ಹಣ ನಷ್ಟವಾದಂತಾಗಿದೆ.
ಇದನ್ನೂ ಓದಿ:ಕೆ.ಎಲ್. ರಾಹುಲ್-ಅಥಿಯಾ ಶೆಟ್ಟಿ ಮದುವೆ ವದಂತಿ: ಸುನೀಲ್ ಶೆಟ್ಟಿ ಹೇಳಿದ್ದೇನು?
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 953.92 ಅಂಕಗಳಷ್ಟು ಕುಸಿತ ಕಂಡಿದ್ದು, 53,133.38 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 234.05 ಅಂಕಗಳಷ್ಟು ಇಳಿಕೆಯಾಗಿದ್ದು, 15,933.05 ಅಂಕಗಳಲ್ಲಿ ವಹಿವಾಟು ನಡೆದಿದೆ.
ಸೆನ್ಸೆಕ್ಸ್, ನಿಫ್ಟಿ ಇಳಿಕೆಯಿಂದ ಆಲ್ಟ್ರಾ ಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಇಂಡಸ್ ಇಂಡ್ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್, ಬಜಾಜ್ ಫಿನ್ ಸರ್ವ್ ಮತ್ತು ಎಲ್ ಆ್ಯಂಡ್ ಟಿ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಪವರ್ ಗ್ರಿಡ್ ಷೇರು ಮಾತ್ರ ಲಾಭಗಳಿಸಿದೆ. ಇನ್ನುಳಿದಂತೆ ಟೋಕಿಯೋ, ಹಾಂಗ್ ಕಾಂಗ್ ಮತ್ತು ಸಿಯೋಲ್ ಷೇರುಮಾರುಕಟ್ಟೆ ಸೆನ್ಸೆಕ್ಸ್ ಇಳಿಕೆ ಕಂಡಿದ್ದು, ಶಾಂಘೈ ಷೇರುಪೇಟೆ ಸೆನ್ಸೆಕ್ಸ್ ಅಲ್ಪ ಪ್ರಮಾಣದ ಏರಿಕೆಯಲ್ಲಿರುವುದಾಗಿ ವರದಿ ತಿಳಿಸಿದೆ.