ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದ ಹೊರತಾಗಿಯೂ ಮುಂಬರಲಿರುವ ತ್ತೈಮಾಸಿಕ ಫಲಿತಾಂಶಗಳು ಚೇತೋಹಾರಿಯಾಗಿರಲಿವೆ ಎಂಬ ವಿಶ್ವಾಸದಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಹೊಸ ಸಾರ್ವಕಾಲಿಕ ಎತ್ತರವನ್ನು ತಲುಪಿದವು.
ಸೆನ್ಸೆಕ್ಸ್ ಇಂದಿನ ವಹಿವಾಟನ್ನು 70.42 ಅಂಕಗಳ ಏರಿಕೆಯೊಂದಿಗೆ 34,503.49 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ ನಿಫ್ಟಿ 19 ಅಂಕಗಳ ಏರಿಕೆಯೊಂದಿಗೆ 10,651.20 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಮುಗಿಸಿತು.
ಇಂದು 3,068 ಶೇರುಗಳು ವಹಿವಾಟಿಗೆ ಒಳಪಟ್ಟವು; 1,607 ಶೇರುಗಳು ಮುನ್ನಡೆ ಸಾಧಿಸಿದವು; 1,329 ಶೇರುಗಳು ಹಿನ್ನಡೆಗೆ ಗುರಿಯಾದವು; 132 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಇಂದಿನ ಟಾಪ್ ಗೇನರ್‌ಗಳು : ಇನ್‌ಫೋಸಿಸ್, ಟೆಕ್ ಮಹೀಂದ್ರ, ಭಾರ್ತಿ ಏರ್‌ಟೆಲ್, ಕೋಟಕ್ ಮಹೀಂದ್ರ, ಟಾಟಾ ಪವರ್.
ಟಾಪ್ ಲೂಸರ್‌ಗಳು : ಇಂಡಸ್ ಇಂಡ್ ಬ್ಯಾಂಕ್, ವಿಪ್ರೋ, ಅಂಬುಜಾ ಸಿಮೆಂಟ್ಸ್ , ಬಜಾಜ್ ಫೈನಾನ್ಸ್, ಸಿಪ್ಲಾ.