ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ನೀರಸ ವಹಿವಾಟಿನ ನಂತರವೂ ಗುರುವಾರ (ಜೂನ್ 09) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 427 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಓಟಿಟಿ ಬಿಡುಗಡೆಗೆ ಸಿದ್ದವಾದ ಸಿಂಪಲ್ ಸುನಿ ನಿರ್ದೇಶನದ ‘ಅವತಾರ ಪುರುಷ’
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 427.79 ಅಂಕ ಏರಿಕೆಯೊಂದಿಗೆ 55,320.28 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಮಧ್ಯಂತರ ವಹಿವಾಟಿನ ವೇಳೆ ಸೆನ್ಸೆಕ್ಸ್ 55,366.84 ಅಂಕಕ್ಕೆ ತಲುಪಿ, 54,507.41 ಅಂಕಕ್ಕೆ ಇಳಿಕೆಯಾಗಿತ್ತು.
ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 121.85 ಅಂಕ ಏರಿಕೆಯೊಂದಿಗೆ 16,478.10 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಡಾ.ರೆಡ್ಡೀಸ್, ರಿಲಯನ್ಸ್ ಇಂಡಸ್ಟ್ರೀಸ್, ಭಾರ್ತಿ ಏರ್ ಟೆಲ್, ಟೆಕ್ ಮಹೀಂದ್ರ, ಸನ್ ಫಾರ್ಮಾ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ಮತ್ತೊಂದೆಡೆ ಟಾಟಾ ಸ್ಟೀಲ್, ಎನ್ ಟಿಪಿಸಿ, ಎಸ್ ಬಿಐ, ಬಜಾಜ್ ಫೈನಾನ್ಸ್ ಷೇರುಗಳು ಶೇ.3.81ರಷ್ಟು ನಷ್ಟ ಕಂಡಿದೆ. ಇನ್ನುಳಿದಂತೆ ಶಾಂಘೈ, ಸಿಯೋಲ್ ಮತ್ತು ಹಾಂಗ್ ಕಾಂಗ್ ಷೇರುಪೇಟೆ ಸೆನ್ಸೆಕ್ಸ್ ಇಳಿಕೆಯಾಗಿದ್ದು, ಟೋಕಿಯೋ ಷೇರುಪೇಟೆ ಸೆನ್ಸೆಕ್ಸ್ ಏರಿಕೆಯೊಂದಿಗೆ ವಹಿವಾಟು ಮುಕ್ತಾಯ ಕಂಡಿದೆ.