Advertisement

ಪರಮೇಶ್ವರ್‌ ನಾಯಕ್‌ ಪುತ್ರನ ಮದುವೆ: ನಿಯಮ ಉಲ್ಲಂಘನೆ

07:41 AM Jun 24, 2020 | Lakshmi GovindaRaj |

ಬೆಂಗಳೂರು: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪಿ.ಟಿ. ಪರಮೇಶ್ವರ್‌ ನಾಯಕ್‌ ಪುತ್ರನ ಮದುವೆಯಲ್ಲಿ ಭಾಗ ವಹಿಸಿ ದವರು ಮಾಸ್ಕ್ ಧರಿಸದೆ ಇರುವ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದ ವಿಚಾರ ಕುರಿತು ಪರಿಶೀಲಿಸಿ  ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. ಈ ಕುರಿತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಅವ ರಿದ್ದ ವಿಭಾಗೀಯ  ನ್ಯಾಯಪೀಠ ಈ ನಿರ್ದೇಶನ ನೀಡಿತು.

Advertisement

ಪರಮೇಶ್ವರ್‌ ನಾಯಕ್‌  ಪುತ್ರನ ಮದುವೆ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಲಾಗಿದೆ. 50ಕ್ಕಿಂತ ಹೆಚ್ಚು ಜನ ಹಾಗೂ 65 ವರ್ಷ ಮೇಲ್ಪಟ್ಟವರೂ ಭಾಗವಹಿಸಿದ್ದರು.  ಸಾಮಾ ಜಿಕ ಅಂತರ  ಪಾಲನೆ ಇರಲಿಲ್ಲ. ಅನೇಕರು ಮಾಸ್ಕ್ ಧರಿಸಿರಲಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ ಅರ್ಜಿದಾರರ ಪರ ವಕೀಲರು, ಆ ಸಂಬಂಧ ಫೋಟೋ ಸಲ್ಲಿಸಿದರು. ಅಲ್ಲದೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪುತ್ರಿ ಹಾಗೂ ಮಾಜಿ ಮುಖ್ಯ ಮಂತ್ರಿ ಎಸ್‌.ಎಂ.ಕೃಷ್ಣ ಮೊಮ್ಮಗನ ಕನ್ಯೆ ನೋಡುವ ಕಾರ್ಯದ ಫೋಟೋ ಮತ್ತು ನಟ ಚಿರಂಜೀವಿ ಸರ್ಜಾ ನಿಧನದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರನ್ನು ನಟ ರಾಘವೇಂದ್ರ ರಾಜ್‌ಕುಮಾರ್‌ ಭೇಟಿ ಮಾಡಿರುವ  ಸಂದರ್ಭದಲ್ಲಿ ತೆಗೆದಿದೆ ಎನ್ನಲಾದ ಫೋಟೋಗಳನ್ನೂ ನ್ಯಾಯ ಪೀಠಕ್ಕೆ ಸಲ್ಲಿಸಲಾಯಿತು.

ಇದನ್ನು ಗಮನಿಸಿದ ನ್ಯಾಯಪೀಠ, ಈ ಸಂಬಂಧ ಕೈಗೊಂಡ ಕ್ರಮಗಳು ಕುರಿತು 2 ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿತು.  ಹಾಗೆಯೇ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಸಂಬಂಧ ಹಲವರ ವಿರುದಟಛಿ ನೈಸರ್ಗಿಕ ವಿಕೋಪ ನಿರ್ವಹಣೆ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಮುಂದಿನ  ಕ್ರಮ ಜರುಗಿಸಲಾಗುತ್ತಿದೆ ಎಂದು ಇದೇ ವೇಳೆ ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next